ಕೊಪ್ಪಳ: ಜಿಲ್ಲೆಯಲ್ಲಿ ಕ್ಷಯರೋಗ ನಿರ್ಮೂಲನೆ ಮಾಡಲು ಸಕಲ ರೀತಿಯ ಪ್ರಯತ್ನಗಳು ನಡೆದಿವೆ. ಆದರೂ ಸಹ ಕ್ಷಯರೋಗಿಗಳ ಪತ್ತೆಯಲ್ಲಿ ಕಾರಣಾಂತರದಿಂದ ಒಂದಿಷ್ಟು ವೈಫಲ್ಯತೆ ಕಾಣುತ್ತಿದೆ ಎಂದು ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಮಹೇಶ್ ಎಂ.ಜಿ. ಹೇಳಿದರು.
ಕ್ಷಯರೋಗಿಗಳ ಪತ್ತೆಯಲ್ಲಿ ಕಾರಣಾಂತರದಿಂದ ಒಂದಿಷ್ಟು ವೈಫಲ್ಯವಾಗುತ್ತಿದೆ: ಮಹೇಶ್ ಎಂ ಜಿ - ಮಹೇಶ ಎಂ ಜಿ
ಕ್ಷಯರೋಗ ನಿರ್ಮೂಲನಾ ದಿನಾಚರಣೆ ಹಿನ್ನೆಲೆಯಲ್ಲಿ ಇದೇ ಮಾ. 25 ರಂದು ಕೊಪ್ಪಳದಲ್ಲಿ ಮ್ಯಾರಥಾನ್ ಹಮ್ಮಿಕೊಳ್ಳಲಾಗಿದೆ.

ಜಿಲ್ಲಾಡಳಿ ಭವನದಲ್ಲಿರುವ ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿ ಸಭಾಂಗಣದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕ್ಷಯ ರೋಗಿಗಳ ಪತ್ತೆಗೆ ಅಂಗನವಾಡಿ, ಆಶಾ ಕಾರ್ಯಕರ್ತರ ಮೂಲಕ ಕ್ರಮ ಕೈಗೊಳ್ಳಲಾಗುತ್ತಿದೆ. ಸರ್ಕಾರಿ ಆಸ್ಪತ್ರೆಗೆ ಬರುವ ರೋಗಿಗಳ ಸಂಖ್ಯೆ ನಮಗೆ ಗೊತ್ತಾಗುತ್ತದೆ. ಆದರೆ, ಖಾಸಗಿ ಆಸ್ಪತ್ರೆಯಲ್ಲಿ ಪತ್ತೆಯಾಗುವ ಕ್ಷಯರೋಗಿಗಳ ಸಂಖ್ಯೆ ಸರಿಯಾಗಿ ಸಿಗುತ್ತಿಲ್ಲ. ಕೆಲವರು ತನಗಿರುವ ಕ್ಷಯ ರೋಗದ ಬಗ್ಗೆ ಮಾಹಿತಿ ನೀಡುವುದಿಲ್ಲ. ಇದು ಸಮಸ್ಯೆಯಾಗುತ್ತಿದೆ ಎಂದರು.
ಕ್ಷಯರೋಗ ನಿರ್ಮೂಲನಾ ದಿನಾಚರಣೆ ಹಿನ್ನೆಲೆಯಲ್ಲಿ ಇದೇ ಮಾ. 25 ರಂದು ನಗರದಲ್ಲಿ ಮ್ಯಾರಥಾನ್ ಹಮ್ಮಿಕೊಳ್ಳಲಾಗಿದೆ. ಮ್ಯಾರಥಾನ್ ಅಲ್ಲದೆ ಕಾಲೇಜು ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಕೂಡ ನಡೆಸಲಾಗಿದೆ. ಅಂದು ಮ್ಯಾರಥಾನ್ ಬಳಿಕ ನಗರದ ನೌಕರರ ಭವನದಲ್ಲಿ ಕಾರ್ಯಕ್ರಮ ನಡೆಯಲಿದೆ. ಸುಮಾರು 500ಕ್ಕೂ ಹೆಚ್ಚು ಜನರು ಮ್ಯಾರಥಾನ್ನಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಡಾ. ಮಹೇಶ್ ಹೇಳಿದರು.