ಕೊಪ್ಪಳ :ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಾವಿನ ಸರಣಿ ಮುಂದುವರೆದಿದ್ದು, ಇಂದು ಒಂದೇ ದಿನ ಕೊರೊನಾ ಸೋಂಕಿಗೆ ಮೂರನೇ ಬಲಿಯಾಗಿದೆ.
ಕೊರೊನಾ ಸೋಂಕಿಗೆ ಮತ್ತೊಂದು ಬಲಿ, 17ಕ್ಕೇರಿದ ಸಾವಿನ ಸಂಖ್ಯೆ - Koppal corona updates
ಇಂದು ಬೆಳಗ್ಗೆಯಿಂದ ಕೊರೊನಾ ಸೋಂಕಿನಿಂದ ಮೂರು ಜನರು ಸಾವನ್ನಪ್ಪಿದ್ದು, ಜನರಲ್ಲಿ ಆತಂಕ ಹೆಚ್ಚಿಸಿದೆ..
Koppal
ತಾಲೂಕಿನ ಕುಣಕೇರಿ ಗ್ರಾಮದ 60 ವರ್ಷದ ಸೋಂಕಿತ ವ್ಯಕ್ತಿ ಮೃತಪಟ್ಟಿದ್ದಾರೆ. ಈತ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದು, ನಿನ್ನೆ ನಗರದ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ.
ಇಂದು ಬೆಳಗ್ಗೆಯಿಂದ ಕೊರೊನಾ ಸೋಂಕಿನಿಂದ ಮೂರು ಜನರು ಸಾವನ್ನಪ್ಪಿದ್ದು, ಜನರಲ್ಲಿ ಆತಂಕ ಹೆಚ್ಚಿಸಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಾವಿನ ಸಂಖ್ಯೆ 17ಕ್ಕೆ ಏರಿಕೆಯಾಗಿದೆ.