ಗಂಗಾವತಿ: ಕೊಪ್ಪಳ ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದೆ. ನಗರ ಪ್ರದೇಶದ ಇಬ್ಬರು ಹಾಗೂ ಗ್ರಾಮೀಣ ಭಾಗದ ಒಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಇಲ್ಲಿನ ಪ್ರದೇಶಗಳನ್ನು ಸೀಲ್ಡೌನ್ ಮಾಡಲು ಸಿದ್ಧತೆ ನಡೆಸುತ್ತಿದ್ದಾರೆ.
ಗಂಗಾವತಿಯಲ್ಲಿ ಟೀ ಮಾರುವ ವ್ಯಕ್ತಿ ಸೇರಿ ಮೂವರಿಗೆ ಕೊರೊನಾ... ಆತಂಕದಲ್ಲಿ ಜನ - latest corona news ]
ಗಂಗಾವತಿಯ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿಂದು ಮೂರು ಕೊರೊನಾ ಪ್ರಕರಣಗಳು ಕಂಡು ಬಂದಿವೆ. ಇವರಲ್ಲಿ ಟೀ ಮಾರು ವ್ಯಕ್ತಿಗೆ ಕೊರೊನಾ ದೃಢಪಟ್ಟಿದ್ದು, ಜನರಲ್ಲಿ ಆತಂಕ ಮನೆಮಾಡಿದೆ.
ಗಂಗಾವತಿಯಲ್ಲಿ ಮುಂದುವರೆದ ಕೊರೊನಾ ಅಟ್ಟಹಾಸ
ಶ್ರೀರಾಮನಗರದ ಮುಖ್ಯರಸ್ತೆಗೆ ಹೊಂದಿಕೊಂಡಂತೆ ಇರುವ ಬೀಡಾ ಅಂಗಡಿಯ ಚಹಾ ಮಾರಾಟಗಾರನಿಗೆ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆ ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದೆ. ಆರೋಗ್ಯ, ಕಂದಾಯ, ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪ್ರದೇಶವನ್ನು ಸೀಲ್ಡೌನ್ ಮಾಡಿದ್ದಾರೆ.
ನಗರದ ಪೀರಜಾಧೆ ರಸ್ತೆಯ ಹಿಂಭಾಗದ ನಿವಾಸಿ ಒಬ್ಬರಿಗೆ ಸೋಂಕು ದೃಢಪಟ್ಟಿದ್ದು, ಇದೀಗ ಏರಿಯಾವನ್ನು ಸೀಲ್ಡೌನ್ ಮಾಡಲಾಗುತ್ತಿದೆ. ಅಲ್ಲದೇ ಕ್ವಾರಂಟೈನ್ನಲ್ಲಿರುವ ಮಹಾರಾಷ್ಟ್ರದಿಂದ ಬಂದಿದ್ದ ವ್ಯಕ್ತಿಯೊಬ್ಬರಿಗೂ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆಯ ಮೂಲಗಳು ತಿಳಿಸಿವೆ.