ಕೊಪ್ಪಳ:ಜಿಲ್ಲೆಯಲ್ಲಿ ಇಂದು ಒಂದೇ ದಿನ ಮತ್ತೆ 40 ಪಾಸಿಟಿವ್ ಕೇಸ್‌ಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 250ಕ್ಕೆ ಏರಿಕೆಯಾಗಿದೆ. ನಿನ್ನೆ 44 ಪಾಸಿಟಿವ್ ಕೇಸ್‌ಗಳು ಪತ್ತೆಯಾದ ಮರು ದಿನವಾದ ಭಾನುವಾರ ಇಂದು ಮತ್ತೆ 40 ಪಾಸಿಟಿವ್ ಕೇಸ್ ಪತ್ತೆಯಾಗಿರೋದು ಜಿಲ್ಲೆಯ ಜನರಲ್ಲಿ ಆತಂಕ ಮತ್ತಷ್ಟು ಹೆಚ್ಚಿಸಿದೆ. ಇಂದು ಮತ್ತಿಬ್ಬರು ಸೋಂಕಿತರು ಸಾವನ್ನಪ್ಪಿದ್ದು ಸಾವಿನ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.
ಕೊಪ್ಪಳದಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಏರಿಕೆ, ಜನತೆಯಲ್ಲಿ ಆತಂಕ - ಕೊಪ್ಪಳದಲ್ಲಿ ಕೊರೊನಾ
ಜಿಲ್ಲೆಯಲ್ಲಿ ಈವರೆಗೆ ಒಟ್ಟು 106 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇನ್ನುಳಿದಂತೆ ಒಟ್ಟು 136 ಸಕ್ರಿಯ ಪ್ರಕರಣಗಳಿಗೆ ಕೊಪ್ಪಳದ ನಿಗದಿತ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಾಳ್ಕರ್ ತಿಳಿಸಿದ್ದಾರೆ.
koppal
ಇನ್ನು 6 ಜನ ಸೋಂಕಿತರು ಇಂದು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ ಒಟ್ಟು 106 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇನ್ನುಳಿದಂತೆ ಒಟ್ಟು 136 ಸಕ್ರಿಯ ಪ್ರಕರಣಗಳಿಗೆ ಕೊಪ್ಪಳದ ನಿಗದಿತ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಾಳ್ಕರ್ ತಿಳಿಸಿದ್ದಾರೆ.