ಗಂಗಾವತಿ:ಗ್ರಾಮೀಣ ಭಾಗದಲ್ಲಿ ಸಂಚರಿಸಿ ಸ್ಥಳದಲ್ಲಿಯೇ ರೋಗಿಗಳನ್ನು ತಪಾಸಣೆಗೆ ಒಳಪಡಿಸಿ ಕ್ಷಯರೋಗ ಪತ್ತೆಹಚ್ಚುವ ಸಂಚಾರಿ ಪ್ರಯೋಗಾಲಯದ ವಾಹನಕ್ಕೆ ಶಾಸಕ ಪರಣ್ಣ ಮುನವಳ್ಳಿ ಚಾಲನೆ ನೀಡಿದರು.
ಗಂಗಾವತಿಯಲ್ಲಿ ಕ್ಷಯರೋಗ ಪತ್ತೆ ಹಚ್ಚುವ ಸಂಚಾರಿ ವಾಹನ: ಶಾಸಕರ ಗ್ರೀನ್ ಸಿಗ್ನಲ್ - koppal news
ಗ್ರಾಮೀಣ ಭಾಗದಲ್ಲಿ ಸಂಚರಿಸಿ ಸ್ಥಳದಲ್ಲಿಯೇ ರೋಗಿಗಳನ್ನು ತಪಾಸಣೆಗೆ ಒಳಪಡಿಸಿ ಕ್ಷಯರೋಗ ಪತ್ತೆಹಚ್ಚುವ ಸಂಚಾರಿ ಪ್ರಯೋಗಾಲಯದ ವಾಹನಕ್ಕೆ ಶಾಸಕ ಪರಣ್ಣ ಮುನವಳ್ಳಿ ಚಾಲನೆ ನೀಡಿದರು.
ಗಂಗಾವತಿಯಲ್ಲಿ ಕ್ಷಯರೋಗ ಪತ್ತೆ ಹಚ್ಚುವ ಮೊಬೈಲ್ ವಾಹನಕ್ಕೆ ಹಸಿರು ನಿಶಾನೆ
ಇಲ್ಲಿನ ಸರ್ಕಾರಿ ಉಪ ವಿಭಾಗ ಆಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಸಾಂಕೇತಿಕ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದ ಶಾಸಕ, ಗ್ರಾಮೀಣ ಭಾಗದ ಜನರಲ್ಲಿ ಕ್ಷಯ ಸೇರಿದಂತೆ ಬಹುತೇಕ ಕಾಯಿಲೆಗಳ ಬಗ್ಗೆ ಜಾಗೃತಿ ಕಡಿಮೆ ಇರುತ್ತದೆ. ಈ ಬಗ್ಗೆ ಆಸ್ಪತ್ರೆ ಸಿಬ್ಬಂದಿ ಹೆಚ್ಚಿನ ನಿಗಾ ವಹಿಸಿ, ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಸಲಹೆ ನೀಡಿದರು.