ಕೊಪ್ಪಳ: ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಇಂದು ಮತ್ತೆ ಇಬ್ಬರು ಸಾವನ್ನಪ್ಪಿದ್ದು, ಈ ಮೂಲಕ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 22ಕ್ಕೆ ಏರಿಕೆಯಾಗಿದೆ.
ಕೊಪ್ಪಳದಲ್ಲಿಂದು ಕೊರೊನಾಗೆ ಇಬ್ಬರು ಬಲಿ: ಸಾವಿನ ಸಂಖ್ಯೆ 22ಕ್ಕೆ ಏರಿಕೆ - ಕೊಪ್ಪಳ ಕೊರೊನಾ ಸೋಂಕಿತ ಸಾವು
ಕೊಪ್ಪಳದ ಕೋವಿಡ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ಸೋಂಕಿತರು ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
Koppal
ಕೋವಿಡ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಯಲಬುರ್ಗಾ ತಾಲೂಕಿನ ಸೋಂಪುರ ಗ್ರಾಮದ 70 ವರ್ಷದ ವೃದ್ಧ ಹಾಗೂ ಗಂಗಾವತಿಯ 46 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ.
ಮೃತ ಮಹಿಳೆಯನ್ನು ಜುಲೈ 27ರಂದು ಐಸಿಯುನಲ್ಲಿ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.