ಕೊಪ್ಪಳ:ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಮತ್ತಿಬ್ಬರು ಬಲಿಯಾಗಿದ್ದು, ಕೊರೊನಾದಿಂದಾಗಿ ಮೃತಪಟ್ಟವರ ಸಂಖ್ಯೆ 16 ಕ್ಕೆ ಏರಿಕೆಯಾಗಿದೆ.
ಕೊಪ್ಪಳ ಜಿಲ್ಲೆಯಲ್ಲಿ ಮತ್ತಿಬ್ಬರು ಕೊರೊನಾಗೆ ಬಲಿ:16 ಕ್ಕೇರಿದ ಸಾವಿನ ಸಂಖ್ಯೆ - ಕೊಪ್ಪಳ ಕೊರೊನಾ
ಕೊಪ್ಪಳ ಜಿಲ್ಲೆಯಲ್ಲಿ ಇಂದು ಇಬ್ಬರು ಕೊರೊನಾ ಸೋಂಕಿತರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದು, ಇದುವರೆಗೆ ಸಾವಿಗೀಡಾದವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ.
ಕೊಪ್ಪಳ
ಕಾರಟಗಿಯ 70 ವರ್ಷದ ಮಹಿಳೆ ಹಾಗೂ ಕೊಪ್ಪಳ ನಿವಾಸಿ 49 ವರ್ಷದ ಪುರುಷ ಸಾವನ್ನಪ್ಪಿದ್ದಾರೆ. ಕಾರಟಗಿಯ 70 ವರ್ಷದ ಮಹಿಳೆ ಎಸ್ಎಆರ್ಐ ಕೇಸ್ ಹಿನ್ನೆಲೆ, ನಿನ್ನೆ ರಾತ್ರಿಯಷ್ಟೆ ಕೊಪ್ಪಳದ ನಿಗದಿತ ಕೋವಿಡ್ -19 ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗಿನ ಜಾವ ಮೃತಪಟ್ಟಿದ್ದಾಳೆ.
ಇನ್ನು ಕೊಪ್ಪಳ ನಗರದ 49 ವರ್ಷದ ಪುರುಷ ಕೂಡ ಎಸ್ಎಆರ್ಐ ಕೇಸ್ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ಚಿಕಿತ್ಸೆಗೆ ದಾಖಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.