ಕರ್ನಾಟಕ

karnataka

ETV Bharat / state

ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ಎರಡು ವಾಹನಗಳು ವಶಕ್ಕೆ: ಚಾಲಕರು ಪರಾರಿ - ಕೊಪ್ಪಳದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ ಸುದ್ದಿ

ಕೊಪ್ಪಳದ ಮುದ್ದಾಬಳ್ಳಿ ಕ್ರಾಸ್ ಬಳಿ ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ಎರಡು ವಾಹನಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಇನ್ನು ವಾಹನಗಳ ಚಾಲಕರು ಪರಾರಿಯಾಗಿದ್ದಾರೆ.

ಅಕ್ರಮ ಪಡಿತರ ಅಕ್ಕಿ ಸಾಗಾಟ

By

Published : Oct 22, 2019, 9:00 AM IST

ಕೊಪ್ಪಳ:ತಾಲೂಕಿನ ಮುದ್ದಾಬಳ್ಳಿ ಕ್ರಾಸ್ ಬಳಿ ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ಎರಡು ವಾಹನಗಳನ್ನು ಜಪ್ತಿ ಮಾಡಲಾಗಿದೆ.

ತಹಶಿಲ್ದಾರ್​ ಜೆ.ಬಿ. ಮಜ್ಜಗಿ ಹಾಗೂ ಗ್ರಾಮೀಣ ಠಾಣೆಯ ಪಿಎಸ್ಐ ಸುರೇಶ್​ ನೇತೃತ್ವದ ತಂಡ ರಾತ್ರಿ ದಾಳಿ‌ ನಡೆಸಿದೆ. ಈ ವೇಳೆ ಎರಡು ವಾಹನಗಳಲ್ಲಿ ಸಾಗಿಸುತ್ತಿದ್ದ ಪಡಿತರ ಅಕ್ಕಿಯನ್ನು ವಶಕ್ಕೆ ಪಡೆದಿದ್ದಾರೆ.

ಅಕ್ರಮವಾಗಿ ಪಡಿತರ ಅಕ್ಕಿ ಸಾಗಣೆ, ಎರಡು ವಾಹನಗಳು ವಶಕ್ಕೆ

ಎರಡು ವಾಹನಗಳಲ್ಲಿ 235 ಬ್ಯಾಗ್​ಗಳಲ್ಲಿ ಸುಮಾರು 50 ಕೆಜಿ ಪಡಿತರ ಅಕ್ಕಿಯನ್ನು ಸಾಗಿಸಲಾಗುತ್ತಿತ್ತು. ಹೊಸಗೊಂಡಬಾಳದಿಂದ ಈ ಅಕ್ಕಿಯನ್ನು ಸಾಗಿಸಲಾಗುತ್ತಿತ್ತು ಎಂದು ಹೇಳಲಾಗ್ತಿದೆ.

ಅಧಿಕಾರಿಗಳು ದಾಳಿ ನಡೆಸುತ್ತಿದ್ದಂತೆ ಚಾಲಕರು ಪರಾರಿಯಾಗಿದ್ದಾರೆ. ವಾಹನ ಚಾಲಕರು ಹಾಗೂ ಮಾಲೀಕರ ವಿರುದ್ಧ ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details