ಗಂಗಾವತಿ:ನಗರದ ಸಾರ್ವಜನಿಕ ಸ್ಥಳ, ವೃತ್ತಗಳಲ್ಲಿ ಅನಧಿಕೃತ ಫ್ಲೆಕ್ಸ್ ಮತ್ತು ಬ್ಯಾನರ್ಗಳ ಹಾವಳಿ ಹೆಚ್ಚುತ್ತಲಿದ್ದು, ಇದರಿಂದ ನಗರದ ಸೌಂದರ್ಯ ಹಾಳಾಗುತ್ತಿದೆ ಎಂದು ಸಾರ್ವಜನಿಕರು ನಗರಸಭೆಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಗಂಗಾವತಿಯಲ್ಲಿ ಅನಧಿಕೃತ ಫ್ಲೆಕ್ಸ್ ಹಾವಳಿ... ನಗರಸಭೆಯ ವಿರುದ್ಧ ಅಸಮಾಧಾನ - Use of unauthorized Flex and Banners is prohibited
ನಗರದ ಸಾರ್ವಜನಿಕ ಸ್ಥಳ, ವೃತ್ತಗಳಲ್ಲಿ ಅನಧಿಕೃತ ಫ್ಲೆಕ್ಸ್ ಮತ್ತು ಬ್ಯಾನರ್ಗಳ ಹಾವಳಿ ಹೆಚ್ಚುತ್ತಲಿದ್ದು, ಇದರಿಂದ ನಗರದ ಸೌಂದರ್ಯ ಹಾಳಾಗುತ್ತಿದೆ ಎಂದು ಸಾರ್ವಜನಿಕರು ನಗರಸಭೆಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
unauthorized-flex-banner
ನಗರದಲ್ಲಿ ಹಾಕಿರುವ ಬಹುತೇಕ ಫ್ಲೆಕ್ಸ್ ಮತ್ತು ಬ್ಯಾನರ್ಗಳು ಅನಧಿಕೃತವಾಗಿದ್ದು, ಫ್ಲೆಕ್ಸ್ ಹಾಕಲು ಶುಲ್ಕ ಪಾವತಿಸಿ ನಗರಸಭೆಯಿಂದ ಯಾವುದೇ ಅನುಮತಿ ಪಡೆಯುತ್ತಿಲ್ಲ. ನಗರದಲ್ಲಿ ನೂರಾರು ಸಂಖ್ಯೆಯಲ್ಲಿ ಈ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಇದ್ದರೂ ನಗರಸಭೆ ಸಿಬ್ಬಂದಿ ಮಾತ್ರ ಯಾವುದೇ ಕಾರ್ಯಾಚರಣೆ ಮಾಡುತ್ತಿಲ್ಲ. ಅನಧಿಕೃತ ಫ್ಲೆಕ್ಸ್ ಮತ್ತು ಬ್ಯಾನರ್ಗಳ ಬಳಕೆ ನಿಷೇಧಿಸಿ ಸುಪ್ರೀಂಕೋರ್ಟ್ ಆದೇಶ ಮಾಡಿದೆ. ಅದರೆ ನಗರಸಭೆ ಮಾತ್ರ ನ್ಯಾಯಾಲಯದ ಆದೇಶಕ್ಕೆ ಯಾವುದೇ ಬೆಲೆ ನೀಡುತ್ತಿಲ್ಲ ಎಂಬ ಆರೋಪ ಸಾರ್ವಜನಿಕ ವಲಯದಿಂದ ಕೇಳಿ ಬಂದಿದೆ.