ಗಂಗಾವತಿ:ನಗರಸಭೆಯ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ನಗರದ ನಾನಾ ಭಾಗದಲ್ಲಿ ಅನುಮತಿ ಪಡೆಯದೇ ಹಾಕಿದ್ದ 20ಕ್ಕೂ ಹೆಚ್ಚು ಫ್ಲೆಕ್ಸ್ ಮತ್ತು ಬ್ಯಾನರ್ಗಳನ್ನು ತೆರವುಗೊಳಿಸಿದರು.
ಗಂಗಾವತಿ ನಗರಸಭೆಯ ಸಿಬ್ಬಂದಿಯಿಂದ ಅನಧಿಕೃತ ಫ್ಲೆಕ್ಸ್ ತೆರವು ಕಾರ್ಯಾಚರಣೆ - operation by municipal staff
ಗಂಗಾವತಿ ನಗರಸಭೆಯ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ನಗರದ ನಾನಾ ಭಾಗದಲ್ಲಿ ಅನುಮತಿ ಪಡೆಯದೇ ಹಾಕಿದ್ದ 20ಕ್ಕೂ ಹೆಚ್ಚು ಫ್ಲೆಕ್ಸ್ ಮತ್ತು ಬ್ಯಾನರ್ಗಳನ್ನು ತೆರವುಗೊಳಿಸಿದರು.
ನಗರಸಭೆಯ ಸಿಬ್ಬಂದಿಯಿಂದ ಅನಧಿಕೃತ ಫ್ಲೆಕ್ಸ್ ತೆರವು ಕಾರ್ಯಚರಣೆ
ನಗರದ ಕೇಂದ್ರ ಬಸ್ ನಿಲ್ದಾಣ, ಕೃಷ್ಣದೇವರಾಯ ವೃತ್ತ, ವಾಲ್ಮಿಕಿ ವೃತ್ತ, ಗಾಂಧಿವೃತ್ತ, ನೀಲಕಂಠೇಶ್ವರ ಸರ್ಕಲ್ ಹೀಗೆ ನಾನಾ ಭಾಗದಲ್ಲಿ ಹಾಕಲಾಗಿದ್ದ ಅನಧಿಕೃತ ಫ್ಲೆಕ್ಸ್ ಮತ್ತು ಬ್ಯಾನರ್ಗಳನ್ನು ತೆರವುಗೊಳಿಸಲಾಯಿತು. ಆದ್ರೆ, ನಗರಸಭೆ ಸಿಬ್ಬಂದಿ ಕೈಗೊಂಡ ಅನಧಿಕೃತ ಬ್ಯಾನರ್ ತೆರವು ಕಾರ್ಯಾಚರಣೆ ಕೇವಲ ಕಲವೇ ಫ್ಲೆಕ್ಸ್ಗಳಿಗೆ ಸೀಮಿತವಾಗಿತ್ತು ಎಂಬ ಆರೋಪಗಳು ಕೇಳಿ ಬಂದಿವೆ.
ಮುಂದಿನ ಎರಡು ದಿನಗಳಲ್ಲಿ ಮತ್ತಷ್ಟು ಅನಧಿಕೃತ ಫ್ಲೆಕ್ಸ್, ಬ್ಯಾನರ್ ತೆರವು ಮಾಡುವುದಾಗಿ ನಗರಸಭೆಯ ನೈರ್ಮಲ್ಯ ವಿಭಾಗದ ಆರೋಗ್ಯ ಸಹಾಯಕ ದತ್ತಾತ್ರೇಯ ಹೆಗಡೆ ಹೇಳಿದ್ದಾರೆ.