ಕರ್ನಾಟಕ

karnataka

ETV Bharat / state

ಪ್ರೀತಿಸಿ ಮದುವೆಯಾಗಿದ್ದ ಜೋಡಿ ಮೇಲೆ ಹಲ್ಲೆ... ಪತ್ನಿ ಸಾವು, ಪತಿ ಗಂಭೀರ!

ಪ್ರೀತಿಸಿ ಮದುವೆಯಾಗಿದ್ದ ಜೋಡಿ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿ ಪರಾರಿಯಾಗಿದ್ದು, ಪತ್ನಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಂಡನ ಸ್ಥಿತಿ ಗಂಭೀರವಾಗಿದೆ.

couple in Gangavati
couple in Gangavati

By

Published : Oct 17, 2020, 10:53 PM IST

ಗಂಗಾವತಿ: ಪರಸ್ಪರ ಪ್ರೀತಿಸಿ ಮದುವೆಯಾಗಿದ್ದ ಜೋಡಿವೊಂದರ ಮೇಲೆ ಮಾರಕಾಸ್ತ್ರಗಳಿಂದ ದುಷ್ಕರ್ಮಿಗಳು ದಾಳಿ ‌ಮಾಡಿರುವ ಘಟನೆ ಗಂಗಾವತಿಯ ಕಾರಟಗಿಯಲ್ಲಿ ನಡೆದಿದೆ.

ದುಷ್ಕರ್ಮಿಗಳ ದಾಳಿಯಿಂದಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಪತಿ ಗಂಭೀರವಾಗಿ ಗಾಯಗೊಂಡಿದ್ದಾನೆ. ಮೃತ ಮಹಿಳೆಯನ್ನ ತ್ರಿವೇಣಿ (34) ಎಂದು ಗುರುತಿಸಲಾಗಿದ್ದು, ಗಂಭೀರವಾಗಿ ಗಾಯಗೊಂಡ ಮೃತಳ ಪತಿಯನ್ನು ವಿನೋದ್​ (31) ಎಂದು ಗುರುತಿಸಲಾಗಿದೆ.

ಸ್ಥಳದಲ್ಲೇ ಸಾವನ್ನಪ್ಪಿದ ಪತ್ನಿ

ಮೂಲತಃ ಬಿಜಾಪುರ ಜಿಲ್ಲೆಯ ಮುಧೋಳದ ಈ ಜೋಡಿ, ಕಳೆದ ಹಲವು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಜೂನ್ ತಿಂಗಳಲ್ಲಿ ಮದುವೆಯಾಗಿದ್ದರು. ಪತಿ ವಿನೋದ್​ ಐಡಿಎಫ್​ಸಿ ಬ್ಯಾಂಕ್​ನಲ್ಲಿ ‌ಮ್ಯಾನೇಜರ್​ ಆಗಿ ಕೆಲಸ ಮಾಡುತ್ತಿದ್ದರು. ಶನಿವಾರ ಕೆಲಸ ಮುಗಿಸಿಕೊಂಡು ಇಬ್ಬರು ಕಾರಟಗಿಯ ಸಿಬಿಎಸ್​ ನಗರದಲ್ಲಿನ ಬಾಡಿಗೆ ಮನೆಗೆ ಹೋಗುವ ಮಾರ್ಗ ಮಧ್ಯೆ ನಿರ್ಜನ್ಯ ಪ್ರದೇಶದಲ್ಲಿ ಕಾದು ಕುಳಿತ್ತಿದ್ದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿ ಪರಾರಿಯಾಗಿದ್ದಾರೆ.

ಪ್ರೀತಿಸಿ ಮದುವೆಯಾಗಿದ್ದ ಜೋಡಿ ಮೇಲೆ ಹಲ್ಲೆ

ಘಟನೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಪತ್ನಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದರೆ, ಪತಿ ವಿನೋದ್ ಗಂಗಾವತಿ ಉಪ ವಿಭಾಗ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಡಿವೈಎಸ್ಪಿ ರುದ್ರೇಶ್ ಉಜ್ಜನಕೊಪ್ಪ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.

ABOUT THE AUTHOR

...view details