ಕೊಪ್ಪಳ :ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಅಸ್ಪೃಶ್ಯತೆ ಇನ್ನೂ ಜೀವಂತವಾಗಿರುವ ಪ್ರಕರಣ ಮತ್ತೆ ಮತ್ತೆ ಬೆಳಕಿಗೆ ಬರುತ್ತಿವೆ. ಕೊಪ್ಪಳ ತಾಲೂಕಿನ ತಿಗರಿ ಗ್ರಾಮದಲ್ಲಿ ಈ ಪ್ರಕರಣ ಬಯಲಿಗೆ ಬಂದಿದೆ.
ಕೊಪ್ಪಳ ಜಿಲ್ಲೆಯಲ್ಲಿ ಅಸ್ಪೃಶ್ಯತೆ ಇನ್ನೂ ಜೀವಂತ!?
ಜಿಲ್ಲೆಯ ಗ್ರಾಮೀಣ ಹೋಟೆಲ್ಗಳಲ್ಲಿ ದಲಿತರು ತಿಂಡಿ ನಂತರ ಅವರಿಗೆ ನೀರು ಕುಡಿಯಲು ಲೋಟ ಕೊಡದೇ ಅವರಿಗಾಗಿಯೇ ಪ್ಲಾಸ್ಟಿಕ್ ಜಗ್ ಮೂಲಕ ನೀರು ಎತ್ತಿ ಹಾಕಲಾಗುತ್ತಿರುವ ದೃಶ್ಯ ಮೊಬೈಲ್ನಲ್ಲಿ ಸೆರೆಯಾಗಿದೆ.
ಅಸ್ಪ್ರಶ್ಯತೆ
ಗ್ರಾಮದ ಹೋಟೆಲ್ಗಳಲ್ಲಿ ದಲಿತರಿಗೆ ಹೊರಗಡೆ ನಿಲ್ಲಿಸಿ ನೀರು ಹಾಕಲಾಗುತ್ತಿದ್ದು, ಸವರ್ಣೀಯರ ಹೋಟೆಲ್ನಲ್ಲಿ ಇನ್ನೂ ಅಸ್ಪೃಶ್ಯತೆ ಜೀವಂತವಿಟ್ಟಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇಲ್ಲಿನ ಹೋಟೆಲ್ನಲ್ಲಿ ದಲಿತರಿಗೆ ನೀರು ಎತ್ತಿ ಹಾಕುವ ದೃಶ್ಯಗಳು ಮೊಬೈಲ್ ನಲ್ಲಿ ಸೆರೆಯಾಗಿವೆ.