ಕೊಪ್ಪಳ: ವಾಲ್ಮೀಕಿ ಸಮುದಾಯಕ್ಕೆ ಶೇ 7.5 ಮೀಸಲಾತಿ ಕಲ್ಪಿಸುವಂತೆ ಒತ್ತಾಯಿಸಿ ನಗರದ ಜಿಲ್ಲಾಡಳಿತ ಭವನದ ಮುಂದೆ ಹಮ್ಮಿಕೊಂಡಿರುವ ಧರಣಿ ಸತ್ಯಾಗ್ರಹ ಮೂರನೇ ದಿನಕ್ಕೆ ಕಾಲಿಟ್ಟಿದೆ.
ಕೊಪ್ಪಳ: 3ನೇ ದಿನಕ್ಕೆ ಕಾಲಿಟ್ಟ ವಾಲ್ಮೀಕಿ ಸಮುದಾಯದ ಧರಣಿ ಸತ್ಯಾಗ್ರಹ - Koppal Valmiki community Satyagraha continue
ರಾಜ್ಯದಲ್ಲಿ ವಾಲ್ಮೀಕಿ ಸಮುದಾಯದ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿಯನ್ನು ಶೇ 7.5 ಕ್ಕೆ ಹೆಚ್ಚಿಸಬೇಕು ಎಂದು ಆಗ್ರಹಿಸಿ ನಡೆಸುತ್ತಿರುವ ಧರಣಿ ಸತ್ಯಾಗ್ರಹ ಮೂರನೇ ದಿನಕ್ಕೆ ಕಾಲಿಟ್ಟಿದೆ.
Koppal
ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿಯನ್ನು ಹೆಚ್ಚಿಸುವಂತೆ ಆಗ್ರಹಿಸಿ ಅ. 21 ರಿಂದ ವಾಲ್ಮೀಕಿ ಸಮುದಾಯದ ಮುಖಂಡರು ಧರಣಿ ಸತ್ಯಾಗ್ರಹ ನಡೆಸುತ್ತಿದ್ದು, ಸಮುದಾಯದ ಸ್ವಾಮೀಜಿಗಳ ಸೂಚನೆಯಂತೆ ಸತ್ಯಾಗ್ರಹ ಮುಂದುವರೆದಿದೆ.
ರಾಜ್ಯದಲ್ಲಿ ನಮ್ಮ ಸಮುದಾಯದ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿಯನ್ನು ಶೇ 7.5 ಕ್ಕೆ ಹೆಚ್ಚಿಸಬೇಕು. ಈ ಕುರಿತು ಸರ್ಕಾರಕ್ಕೆ ಸಾಕಷ್ಟು ಬಾರಿ ಮನವಿ ಮಾಡಿದ್ದೇವೆ. ಇನ್ನಾದರೂ ಸಂಬಂಧಿಸಿದವರು ನಮ್ಮ ಬೇಡಿಕೆಯನ್ನು ಈಡೇರಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.