ಕೊಪ್ಪಳ: ಪ್ರತಿಕ್ರಿಯೆ ಕೇಳಲು ಮುಂದಾದ ಮಾಧ್ಯಮ ಪ್ರತಿನಿಧಿಗಳ ಮೇಲೆ ಮಾಜಿ ಸಚಿವ ವೆಂಕಟರಾವ್ ನಾಡಗೌಡ ಕಿಡಿ ಕಾರಿದ ಘಟನೆ ತಾಲೂಕಿನ ಮುನಿರಾಬಾದ್ ಜಲಾಶಯದ ಬಳಿ ನಡೆದಿದೆ.
ಪ್ರತಿಕ್ರಿಯೆ ಕೇಳಿದ ಮಾಧ್ಯಮದವರ ಮೇಲೆ ರೊಚ್ಚಿಗೆದ್ದ ಮಾಜಿ ಸಚಿವ ನಾಡಗೌಡ - ವೆಂಕಟರಾವ್ ನಾಡಗೌಡ
ತುಂಗಭದ್ರಾ ಜಲಾಶಯದ ಎಡದಂಡೆಯ ಗೇಟ್ ದುರಸ್ತಿ ಕಾರ್ಯ ಪರಿಶೀಲನೆಗೆಂದು ವೆಂಕಟರಾವ್ ನಾಡಗೌಡ ಆಗಮಿಸಿದ್ದು, ಈ ಸಂದರ್ಭದಲ್ಲಿ ಮಾಧ್ಯಮದವರು ಪ್ರತಿಕ್ರಿಯೆ ಕೇಳಿದ್ದಕ್ಕೆ ಉತ್ತರಿಸದೆ ಕಿಡಿ ಕಾರಿದ್ದಾರೆ.
ತಾಲೂಕಿನ ಮುನಿರಾಬಾದ್ ಬಳಿಯ ತುಂಗಭದ್ರಾ ಜಲಾಶಯದ ಎಡದಂಡೆಯ ಮೇಲ್ಮಟ್ಟದ ನಾಲೆಯ ಗೇಟ್ ದುರಸ್ತಿ ಕಾರ್ಯ ನಡೆಯುತ್ತಿರುವ ಸ್ಥಳಕ್ಕೆ ಮಾಜಿ ಸಚಿವ ವೆಂಕಟರಾವ್ ನಾಡಗೌಡ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಘಟನೆ ಕುರಿತಂತೆ ಹಾಗೂ ಫೋನ್ ಕದ್ದಾಲಿಕೆ ಪ್ರಕರಣ ಕುರಿತಂತೆ ಮಾಧ್ಯಮ ಪ್ರತಿನಿಧಿಗಳು ಪ್ರತಿಕ್ರಿಯೆ ಪಡೆಯಲು ಮುಂದಾಗಿದ್ದಾರೆ. ಆದರೆ, ಆರಂಭದಲ್ಲಿಯೇ ದರ್ಪದಿಂದ ಮಾತನಾಡಿದ್ದಾರೆ. ಅಲ್ಲದೆ ಏಕ ವಚನದಿಂದಲೇ ನಿಂದಿಸಿ ತಮ್ಮ ಅಧಿಕಾರದ ದರ್ಪ ತೋರಿದ್ದಾರೆ.
ಈ ಸಂದರ್ಭದಲ್ಲಿ ನಾಡಗೌಡ ಮಾತ್ರವಲ್ಲದೇ ಅವರ ಜೊತೆ ಬಂದಿದ್ದ ವ್ಯಕ್ತಿಯೂ ಇದೇ ರೀತಿ ವರ್ತನೆ ತೋರಿದ್ದಾರೆ. ಇದರಿಂದ ಕೆರಳಿದ ಮಾಧ್ಯಮ ಪ್ರತಿನಿಧಿಗಳು ಮಾಜಿ ಸಚಿವ ವೆಂಕಟರಾವ್ ನಾಡಗೌಡ ಹಾಗೂ ಅವರ ಹಿಂಬಾಲಕ ವ್ಯಕ್ತಿಯನ್ನು ಸರಿಯಾಗಿಯೇ ತರಾಟೆಗೆ ತೆಗೆದುಕೊಂಡ ಪರಿಣಾಮ ಅಲ್ಲಿಂದ ಅವರು ಕಾಲ್ಕಿತ್ತರು.