ಗಂಗಾವತಿ:ತಾಲೂಕಿನ ಕೆಲ ಶಾಲೆಗಳಲ್ಲಿ ವಿದ್ಯಾಗಮ ಯೋಜನೆಯಡಿಯಲ್ಲಿ ವಠಾರದ ಬದಲಿಗೆ ಶಾಲೆಗಳಲ್ಲಿ ಮಕ್ಕಳಿಗೆ ತರಗತಿ ನಡೆಸುತ್ತಿರುವ ಬಗ್ಗೆ ಈಟಿವಿ ಭಾರತದಲ್ಲಿ ಸುದ್ದಿ ಪ್ರಸಾರವಾದ ಹಿನ್ನೆಲೆ ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಶೇಖರಗೌಡ, ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ವಿದ್ಯಾಗಮ ಕಾರ್ಯಕ್ರಮದನ್ವಯ ಶಿಕ್ಷಕರು ಮಕ್ಕಳಿರುವ ಆಯಾ ವಠಾರ ಅಥವಾ ಕೇರಿಗಳಿಗೆ ತೆರಳಿ ಮಕ್ಕಳಿಗೆ ಪಾಠ ಮಾಡಬೇಕು. ಆದರೆ ಆನೆಗೊಂದಿ ಕ್ಲಸ್ಟರ್ ವ್ಯಾಪ್ತಿಗೆ ಬರುವ ರಾಂಪುರ, ಸೋನಿಯಾ ನಗರ, ಚಿಕ್ಕರಾಂಪುರ, ಹನುಮನಹಳ್ಳಿ, ಸಣಾಪುರ ಹಾಗೂ ಚಿಕ್ಕರಾಂಪುರದ ಸರ್ಕಾರಿ ಹಾಗೂ ಕಿರಿಯ ಪ್ರಾಥಮಿಕ ಶಾಲೆಗಳಲ್ಲಿ ಮಕ್ಕಳನ್ನು ಶಿಕ್ಷಕರು ಶಾಲೆಗೆ ಕರೆಸಿಕೊಂಡು ಪಾಠ ಮಾಡ್ತಿದ್ದಾರೆ. ಈ ಹಿನ್ನೆಲೆ ಶಿಕ್ಷಣಾಧಿಕಾರಿ ಭೇಟಿ ನೀಡಿ ಸ್ಥಳೀಯರೊಂದಿಗೆ ಚರ್ಚೆ ನಡೆಸಿದರು.
ಮಾಧ್ಯಮದಲ್ಲಿ ಪ್ರಕಟವಾದ ವರದಿ ಆಧರಿಸಿ ಆಯಾ ಶಾಲಾ ಶಿಕ್ಷಕರಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಿರುವ ಬಿಇಒ, ಮೂರು ದಿನದೊಳಗೆ ನೋಟಿಸ್ಗೆ ಉತ್ತರಿಸಬೇಕು ಇಲ್ಲದಿದ್ದರೆ ಶಿಸ್ತುಕ್ರಮ ಕೈಗೊಳ್ಳುವುದಾಗಿ ಉಲ್ಲೇಖಿಸಿದ್ದಾರೆ.