ಕರ್ನಾಟಕ

karnataka

ETV Bharat / state

ಪಂಚಮಸಾಲಿ ಹೋರಾಟವನ್ನು ಹತ್ತಿಕ್ಕಲು ಅನೇಕರು ಪ್ರಯತ್ನಿಸಿದ್ದಾರೆ: ವಿಜಯಾನಂದ ಕಾಶಪ್ಪನವರ್

ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಸಿಗದಂತೆ ಕಾಲೆಳೆಯಲು ಅನೇಕರು ನಿರತರಾಗಿದ್ದಾರೆ. ಆದರೆ ಅವರ ಉದ್ದೇಶ ಫಲಿಸುವುದಿಲ್ಲ ಎಂದು ಅಖಿಲ ಭಾರತ ಪಂಚಮಸಾಲಿ ಸಮಾಜದ ರಾಷ್ಟ್ರೀಯ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್ ಪರೋಕ್ಷವಾಗಿ ಸಚಿವರಾದ ಮುರುಗೇಶ್​ ನಿರಾಣಿ ಹಾಗೂ ಸಿ.ಸಿ. ಪಾಟೀಲ್​ ವಿರುದ್ದ ಹರಿಹಾಯ್ದರು.

ವಿಜಯಾನಂದ ಕಾಶಪ್ಪನವರ್
ವಿಜಯಾನಂದ ಕಾಶಪ್ಪನವರ್

By

Published : Nov 8, 2021, 10:28 AM IST

ಕುಷ್ಟಗಿ/ಕೊಪ್ಪಳ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವಂತೆ ಆಗ್ರಹಿಸಿ ಕೂಡಲಸಂಗಮದಿಂದ ಬೆಂಗಳೂರಿಗೆ ಪಾದಯಾತ್ರೆ ನಡೆಸುತ್ತಿದ್ದಾಗ ನಮ್ಮ ಹೋರಾಟವನ್ನು ಹತ್ತಿಕ್ಕಲು ಅನೇಕರು ಪ್ರಯತ್ನಿಸಿದರು ಎಂದು ಮಾಜಿ ಶಾಸಕ‌ ಹಾಗೂ ಅಖಿಲ ಭಾರತ ಪಂಚಮಸಾಲಿ ಸಮಾಜದ ರಾಷ್ಟ್ರೀಯ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್ ಹೇಳಿದರು.

ತಾಲೂಕಿನ ಕಡೇಕೊಪ್ಪ ಗ್ರಾಮದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ 243ನೇ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಮಾಜದಲ್ಲಿ ಇಂತಹ ಕೀಚಕರಿದ್ದಾರೆ. ಪಂಚಮಸಾಲಿ ಸಮಾಜಕ್ಕೆ 2 ಎ ಮೀಸಲಾತಿ ಸಿಗದಂತೆ ಕಾಲೆಳೆಯಲು ಅನೇಕರು ನಿರತರಾಗಿದ್ದಾರೆ. ಆದರೆ ಅವರ ಉದ್ದೇಶ ಫಲಿಸುವುದಿಲ್ಲ ಎಂದು ಪರೋಕ್ಷವಾಗಿ ಸಚಿವರಾದ ಮುರುಗೇಶ್​ ನಿರಾಣಿ ಹಾಗೂ ಸಿ.ಸಿ. ಪಾಟೀಲ್​ ವಿರುದ್ಧ ಹರಿಹಾಯ್ದರು.

ಪಂಚಮಸಾಲಿ ಮೀಸಲಾತಿ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ವಿಜಯಾನಂದ ಕಾಶಪ್ಪನವರ್

ಬಸವರಾಜ ಬೊಮ್ಮಾಯಿ ಗೃಹ ಸಚಿವರಾಗಿದ್ದಾಗ ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಬೆಂಬಲ ನೀಡಿದ್ದರು. ಆದ್ರೆ ಬೆಂಗಳೂರು ಆರಮನೆ ಮೈದಾನದಲ್ಲಿ ಸಮಾವೇಶಕ್ಕೆ ಯಡಿಯೂರಪ್ಪನವರ ಮಗ ವಿಜಯೇಂದ್ರ ಹಸ್ತಕ್ಷೇಪದಿಂದ ಪರವಾನಿಗೆ ನೀಡಲಿಲ್ಲ ಎಂದು ಆರೋಪಿಸಿದರು.

ಸಿಎಂ ಬೊಮ್ಮಾಯಿ ಬಗ್ಗೆ ವಿಶ್ವಾಸ:

ನಮ್ಮ ಸಮಾಜಕ್ಕೆ 2ಎ ಮೀಸಲಾತಿ ನೀಡುವ ವಿಚಾರದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ನೀಡಿದ ಮೂರು ತಿಂಗಳ ಗಡುವಿನಲ್ಲಿ ಇನ್ನೂ 2 ತಿಂಗಳು ಬಾಕಿ ಇದೆ. ಅಷ್ಟರೊಳಗೆ ಅವರು ನಮ್ಮ ಸಮಾಜಕ್ಕೆ ಮೀಸಲಾತಿ ನೀಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿಎಸ್​ವೈಗೆ ಬಸವಜಯ ಮೃತ್ಯುಂಜಯ ಸ್ವಾಮೀಜಿ ಶಾಪ:

ಬಿಎಸ್​ವೈಗೆ ಬಂದಂತಹ ದುರ್ಗತಿ ಸಿಎಂ ಬಸವರಾಜ ಬೊಮ್ಮಾಯಿಗೆ ಬರಬಾರದು ಎನ್ನುವುದಾದ್ರೆ ನಮ್ಮ ಸಮಾಜಕ್ಕೆ 2ಎ ಮೀಸಲಾತಿ ನೀಡಬೇಕು. ಯಡಿಯೂರಪ್ಪ ಸಿಎಂ ಸ್ಥಾನ ಕಳೆದುಕೊಳ್ಳಲು ಬಸವಜಯ ಮೃತ್ಯುಂಜಯ ಸ್ವಾಮೀಜಿಗಳು ಶಾಪ ಹಾಕಿದ್ದರು ಎಂದರು.

ABOUT THE AUTHOR

...view details