ಕೊಪ್ಪಳ :ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಹೆಸರಲ್ಲಿ ಅಳವಡಿಸಲಾಗಿದ್ದ ನಾಮಫಲಕ ಹಾಗೂ ಕನ್ನಡ ಬಾವುಟವನ್ನು ಕಿಡಿಗೇಡಿಗಳು ಕಿತ್ತು ಹಾಕಿರುವ ಘಟನೆ ನಡೆದಿದೆ.
ತಾಲೂಕಿನ ಹೂವಿನಾಳ ಗ್ರಾಮದಲ್ಲಿ ನಿನ್ನೆ ತಡರಾತ್ರಿ ಈ ಘಟನೆ ನಡೆದಿದ್ದು, ನಾಮಫಲಕ ತೆಗೆದುಕೊಂಡು ಹೋಗಿ ಕೆರೆಯಲ್ಲಿ ಬಿಸಾಕಿದ್ದಾರೆ. ಕಿಡಿಗೇಡಿಗಳು ನಾಮಫಲಕ ತೆಗೆದುಕೊಂಡು ಹೋಗುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.