ಕೊಪ್ಪಳ: ಜಿಲ್ಲೆಯಲ್ಲಿ ಲಾಕ್‌ಡೌನ್ ನಿಯಮ ಉಲ್ಲಂಘಿಸಿ ರಸ್ತೆಗಳಿದ ಹಲವು ಬೈಕ್ಗಳನ್ನು ವಶಕ್ಕೆ ಪಡೆಯಲಾಗಿದ್ದು, ಕೆಲವು ಪ್ರಕರಣಗಳಿಗೆ ದಂಡ ವಿಧಿಸಲಾಗಿದೆ.
ಲಾಕ್‌ಡೌನ್ ನಿಯಮ ಉಲ್ಲಂಘನೆ: ಕೊಪ್ಪಳದಲ್ಲಿ 100 ವಾಹನಗಳು ಜಪ್ತಿ - vehicles seized
ಜಿಲ್ಲೆಯಲ್ಲಿ ಲಾಕ್‌ಡೌನ್ ನಿಯಮಗಳನ್ನು ಉಲ್ಲಂಘಿಸಿ ರಸ್ತೆಗಿಳಿದ 100 ವಾಹನಗಳನ್ನು ಜಪ್ತಿ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ. ಶ್ರೀಧರ್ ತಿಳಿಸಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಶ್ರೀಧರ್
100 ವಾಹನಗಳನ್ನು ಜಪ್ತಿ ಮಾಡಿದ್ದು, ಮೋಟಾರು ವಾಹನ ಕಾಯ್ದೆಯಡಿ 211 ಪ್ರಕರಣಗಳಲ್ಲಿ 67,300 ರೂ. ದಂಡ ವಿಧಿಸಲಾಗಿದೆ. ಮಾಸ್ಕ್ ಹಾಗೂ ಸಾಮಾಜಿಕ ಅಂತರ ನಿಯಮ ಉಲ್ಲಂಘನೆಗೆ ಸಂಬಂಧಿಸಿದಂತೆ 308 ಪ್ರಕರಣಗಳಿಂದ 30,800 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದರು.
ಜಿಲ್ಲೆಯ ವಿವಿಧೆಡೆಯಲ್ಲಿ 9 ಚೆಕ್ಪೋಸ್ಟ್, ಅಂತರ್ ಜಿಲ್ಲಾ ಗಡಿಗಳಲ್ಲಿ 12 ಚೆಕ್ಪೋಸ್ಟ್ ಪ್ರಾರಂಭಿಸಲಾಗಿದೆ. ಬೇರೆ ಬೇರೆ ಪ್ರದೇಶಗಳಿಂದ ಬರುವ ಸಾರ್ವಜನಿಕರನ್ನು ಕಡ್ಡಾಯವಾಗಿ ಪರಿಶೀಲಿಸಲಾಗುತ್ತಿದೆ ಎಂದು ಅವರು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.