ಕೊಪ್ಪಳ:ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದ್ದು ಸುಮಾರು ಒಂದು ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರನ್ನು ನದಿಗೆ ಹರಿಬಿಡಲಾಗಿದೆ. ಇದ್ರಿಂದಾಗಿ ಗಂಗಾವತಿ- ಕಂಪ್ಲಿ ನಡುವಿನ ರಸ್ತೆ ಸಂಪರ್ಕ ಕಡಿತಗೊಂಡಿದೆ.
ತುಂಗಭದ್ರಾ ಡ್ಯಾಂನಿಂದ ನೀರು ಬಿಡುಗಡೆ, ಗಂಗಾವತಿ-ಕಂಪ್ಲಿ ರಸ್ತೆ ಸಂಪರ್ಕ ಕಡಿತ - ಗಂಗಾವತಿ-ಕಂಪ್ಲಿ ಸಂಪರ್ಕ ಕಡಿತ
ರಾಜ್ಯದಲ್ಲಿ ಮಳೆರಾಯ ಆರ್ಭಟಿಸುತ್ತಿದ್ದು, ತುಂಗಭದ್ರಾ ಜಲಾಶಯದಲ್ಲಿ ಒಳಹರಿವು ಹೆಚ್ಚಾದ ಹಿನ್ನೆಲೆ ನದಿಗೆ ನೀರು ಹರಿಸಲಾಗಿದೆ. ಇದರಿಂದ ಹಲವು ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ.

ತಾಲೂಕಿನ ಮುನಿರಾಬಾದ್ ಬಳಿ ಇರುವ ತುಂಗಭದ್ರಾ ಜಲಾಶಯದ 33 ಕ್ರಸ್ಟ್ ಗೇಟ್ಗಳ ಮೂಲಕ 1 ಲಕ್ಷ ಕ್ಯೂಸೆಕ್ ನೀರು ನದಿಗೆ ಹರಿಬಿಡಲಾಗಿದೆ. ಅಧಿಕ ಪ್ರಮಾಣದಲ್ಲಿ ನದಿಯಲ್ಲಿ ನೀರು ಹರಿಯುತ್ತಿರುವುದರಿಂದ ಚಿಕ್ಕಜಂತಕಲ್ ಬಳಿಯ ಸೇತುವೆ ಮೇಲೆ ನೀರು ಹರಿಯುತ್ತಿದೆ. ಹೀಗಾಗಿ ತುಂಗಭದ್ರಾ ನದಿ ಪಾತ್ರದಲ್ಲಿರುವ ಆನೆಗುಂದಿ ಬಳಿಯ ನವವೃಂದಾವನ, ವಿರುಪಾಪುರಗಡ್ಡೆ ಸಂಪರ್ಕ ಕಡಿದುಕೊಂಡಿವೆ.
ಆನೆಗುಂದಿ ಬಳಿಯ ಶ್ರೀ ಕೃಷ್ಣದೇವರಾಯ ಸಮಾಧಿಯ ಮಂಟಪ ಸಂಪೂರ್ಣ ಮುಳುಗಡೆಯಾಗಿದ್ದು, ವಿರುಪಾಪುರಗಡ್ಡೆ, ಗಂಗಾವತಿ - ಕಂಪ್ಲಿ ಸೇತುವೆ ಸೇರಿದಂತೆ ಅಲ್ಲಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಇನ್ನು ನದಿ ಪಾತ್ರದ ಜನ ನದಿಗೆ ಇಳಿಯದಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.