ಕೊಪ್ಪಳ:ತುಂಗಭದ್ರಾ ಜಲಾಶಯದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ನಿರ್ಧರಿಸಿದಂತೆ ಇಂದು ವಿವಿಧ ನಾಲೆಗಳಿಗೆ ಜಲಾಶಯದಿಂದ ನೀರು ಹರಿಸಲಾಗಿದೆ. ತುಂಗಭದ್ರಾ ಎಡದಂಡೆ ನಾಲೆಗೆ ನೀರು ಹರಿಸಲಾಗಿದ್ದು ಜಿಲ್ಲೆಯ ಜನಪ್ರತಿನಿಧಿಗಳು ಪೂಜೆ ಸಲ್ಲಿಸಿದರು.
ತುಂಗಭದ್ರಾ ಜಲಾಶಯದಿಂದ ನಾಲೆಗಳಿಗೆ ನೀರು ಬಿಡುಗಡೆ - ತುಂಗಭದ್ರಾ ಜಲಾಶಯದ ನೀರಾವರಿ ಸಲಹಾ ಸಮಿತಿ
ತುಂಗಭದ್ರಾ ಎಡದಂಡೆ ನಾಲೆಗೆ 4,100 ಕ್ಯೂಸೆಕ್, ಬಲದಂಡೆ ಮೇಲ್ಮಟ್ಟದ ಕಾಲುವೆಗೆ 1,130 ಕ್ಯೂಸೆಕ್, ಬಲದಂಡೆ ಕೆಳ ಮಟ್ಟದ ಕಾಲುವೆಗೆ 700 ಕ್ಯೂಸೆಕ್, ರಾಯ ಬಸವಣ್ಣ ನಾಲೆಗೆ 235 ಕ್ಯೂಸೆಕ್, ಎಡದಂಡೆ ಮೇಲ್ಮಟ್ಟದ ಕಾಲುವೆಗೆ 25 ಕ್ಯೂಸೆಕ್ ನೀರು ಹರಿಸಲಾಗುತ್ತಿದೆ.
![ತುಂಗಭದ್ರಾ ಜಲಾಶಯದಿಂದ ನಾಲೆಗಳಿಗೆ ನೀರು ಬಿಡುಗಡೆ tungabhadra-reservoir](https://etvbharatimages.akamaized.net/etvbharat/prod-images/768-512-12496808-thumbnail-3x2-kddk.jpg)
ತುಂಗಭದ್ರಾ ಜಲಾಶಯ
ತುಂಗಭದ್ರಾ ಜಲಾಶಯದಿಂದ ವಿವಿಧ ನಾಲೆಗೆ ನೀರು ಬಿಡುಗಡೆ
ತುಂಗಭದ್ರಾ ಎಡದಂಡೆ ನಾಲೆಗೆ 4,100 ಕ್ಯೂಸೆಕ್, ಬಲದಂಡೆ ಮೇಲ್ಮಟ್ಟದ ಕಾಲುವೆಗೆ 1,130 ಕ್ಯೂಸೆಕ್, ಬಲದಂಡೆ ಕೆಳ ಮಟ್ಟದ ಕಾಲುವೆಗೆ 700 ಕ್ಯೂಸೆಕ್, ರಾಯ ಬಸವಣ್ಣ ನಾಲೆಗೆ 235 ಕ್ಯೂಸೆಕ್, ಎಡದಂಡೆ ಮೇಲ್ಮಟ್ಟದ ಕಾಲುವೆಗೆ 25 ಕ್ಯೂಸೆಕ್ ನೀರು ಹರಿಸಲಾಗುತ್ತಿದೆ. ಇಂದಿನಿಂದ ನವೆಂಬರ್ 30ರವರೆಗೆ ನೀರು ಹರಿಸಲಾಗುತ್ತದೆ.
ಪೂಜಾ ಕಾರ್ಯಕ್ರಮದಲ್ಲಿ ತುಂಗಭದ್ರಾ ಕಾಡಾ ಅಧ್ಯಕ್ಷ ತಿಪ್ಪೇರುದ್ರಸ್ವಾಮಿ, ಶಾಸಕರಾದ ಕೆ. ರಾಘವೇಂದ್ರ ಹಿಟ್ನಾಳ, ಪರಣ್ಣ ಮುನವಳ್ಳಿ, ತ್ರೈಮಾಸಿಕ ಕೆಡಿಪಿ ಸದಸ್ಯ ಅಮರೇಶ ಕರಡಿ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.