ಕರ್ನಾಟಕ

karnataka

By

Published : Oct 25, 2020, 7:42 AM IST

ETV Bharat / state

ಸಾಮಾಜಿಕ ಪಿಡುಗುಗಳನ್ನು ಹತ್ತಿಕ್ಕಿ ಕಾನೂನು ಸುವ್ಯವಸ್ಥೆ ಕಾಪಾಡಲು ಶ್ರಮಿಸುತ್ತೇವೆ: ಎಸ್​ಪಿ ಟಿ. ಶ್ರೀಧರ್

ಕೊಪ್ಪಳ ಜಿಲ್ಲೆಗೆ ಎಸ್​ಪಿ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಗಂಗಾವತಿಗೆ ಆಗಮಿಸಿದ್ದ ಪೊಲೀಸ್​ ವರಿಷ್ಠಾಧಿಕಾರಿ ಟಿ ಶ್ರೀಧರ ಅವರು, ಸಾಮಾಜಿಕ ಪಿಡುಗಗಳನ್ನು ಹತ್ತಿಕ್ಕುವುದಾಗಿ ಹೇಳಿದರು. ಅಲ್ಲದೆ, ಕಾನೂನು ಸುವ್ಯವಸ್ಥೆ ಕಾಪಾಡುವುದಾಗಿ ಹೇಳಿದರು.

We strive to maintain law and order through our service: SP T. Sridhar
ಅಸಾಮಾಜಿಕ ಚಟುವಟಿಕೆಗಳನ್ನು ಹತ್ತಿಕ್ಕಿ ಕಾನೂನು ಸುವ್ಯವಸ್ಥೆ ಕಾಪಾಡಲು ಶ್ರಮಿಸುತ್ತೇವೆ: ಎಸ್​ಪಿ ಟಿ. ಶ್ರೀಧರ್

ಗಂಗಾವತಿ(ಕೊಪ್ಪಳ):ಅಕ್ರಮ ಮರಳು ಮತ್ತು ಗಣಿಗಾರಿಕೆ ನಿಯಂತ್ರಣದಲ್ಲಿ ನಮ್ಮ ಇಲಾಖೆಯದ್ದು ಸಣ್ಣಪಾತ್ರ. ಆದರೆ, ಜಿಲ್ಲೆಯಲ್ಲಿನ ಸಾಮಾಜಿಕ ಪಿಡುಗಗಳ ವಿರುದ್ಧ ಹೆಚ್ಚಿನ ಗಮನಹರಿಸಿ ನಿಯಂತ್ರಣ ಮಾಡಲಾಗುವುದು ಎಂದು ಎಸ್​ಪಿ ಟಿ. ಶ್ರೀಧರ್​ ಹೇಳಿದರು.

ಸಾಮಾಜಿಕ ಪಿಡುಗುಗಳನ್ನು ಹತ್ತಿಕ್ಕಿ ಕಾನೂನು ಸುವ್ಯವಸ್ಥೆ ಕಾಪಾಡಲು ಶ್ರಮಿಸುತ್ತೇವೆ: ಎಸ್​ಪಿ ಟಿ. ಶ್ರೀಧರ್

ಜಿಲ್ಲಾ ಎಸ್​ಪಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಗಂಗಾವತಿ ನಗರಕ್ಕೆ ಆಗಮಿಸಿದ್ದ ಅವರು, ಇಲ್ಲಿನ ವಿವಿಧ ಠಾಣೆಗಳಿಗೆ ಭೇಟಿ ನೀಡಿದ್ದರು. ಬಳಿಕ ಮಾತನಾಡಿ, ಜಿಲ್ಲೆಯಲ್ಲಿ ಇಸ್ಪೀಟ್​, ಮಟ್ಕಾ, ಜೂಜಾಟ, ಅಕ್ರಮ ಮದ್ಯ ನಿಯಂತ್ರಣಕ್ಕೆ ಹೆಚ್ಚಿನ ನಿಗಾ ವಹಿಸಲಾಗುವುದು. ಜಿಲ್ಲೆಯ ಎಲ್ಲಾ ಠಾಣೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗುತ್ತಿದೆ. ಸಾರ್ವಜನಿಕರೊಂದಿಗೆ ಸಂಪರ್ಕ ಸಾಧಿಸಿ ಮಾಹಿತಿ ಪಡೆಯಲಾಗುತ್ತಿದೆ. ಜಿಲ್ಲೆಯಲ್ಲಿ ಸಾಮಾಜಿಕ ಪಿಡುಗುಗಳ ಬಗ್ಗೆ ವ್ಯಾಪಕ ದೂರುಗಳು ಕೇಳಿ ಬರುತ್ತಿದ್ದು, ಅವುಗಳ ನಿಯಂತ್ರಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದರು.

ಅಕ್ರಮ ಮರಳು, ಮದ್ಯ ದಂಧೆಗೆ ಸಂಬಂಧಿಸಿದಂತೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ಅಬಕಾರಿ ಇಲಾಖೆಗಳಿದ್ದು, ಅವರು ಕ್ರಮ ಕೈಗೊಳ್ಳುತ್ತಾರೆ. ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟ ನಡೆಯದಂತೆ ತಡೆಯಲು ನಮ್ಮ ಸಿಬ್ಬಂದಿ ಶ್ರಮಿಸಲಿದ್ದಾರೆ ಎಂದು ಶ್ರೀಧರ್​ ಭರವಸೆ ನೀಡಿದರು.

ABOUT THE AUTHOR

...view details