ಕೊಪ್ಪಳ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಘೋಷಿಸದಿದ್ದರೆ ಕ್ರಾಂತಿ ಅನಿವಾರ್ಯ ಎಂದು ಪಂಚಮಸಾಲಿ ಸಮಾಜದ ಮುಖಂಡ, ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ಹೇಳಿದ್ದಾರೆ.
ಜೀವ ಬಿಡುತ್ತೇವೆ ಹೊರತು ಮೀಸಲಾತಿ ಬಿಡುವುದಿಲ್ಲ: ವಿಜಯಾನಂದ ಕಾಶಪ್ಪನವರ್ - Vijayananda Kashappanavar
ನಮ್ಮ ಜೀವ ಬಿಡುತ್ತೇವೆ ಹೊರತು ಮೀಸಲಾತಿ ಪಡೆಯೋದನ್ನು ಬಿಡುವುದಿಲ್ಲ ಎಂದು ಪಂಚಮಸಾಲಿ ಸಮಾಜದ ಮುಖಂಡ, ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ಹೇಳಿದ್ದಾರೆ.
ವಿಜಯಾನಂದ ಕಾಶಪ್ಪನವರ್ ಹೇಳಿಕೆ
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗಾಗಿ ಆಗ್ರಹಿಸಿ ಶ್ರೀಗಳ ನೇತೃತ್ವದಲ್ಲಿ ಪಾದಯಾತ್ರೆ ಮುಂದುವರೆದಿದೆ. ಪಾದಯಾತ್ರೆ ಬೆಂಗಳೂರು ತಲುಪುವುದರೊಳಗಾಗಿ ಸರ್ಕಾರ 2ಎ ಮೀಸಲಾತಿ ಘೋಷಿಸಬೇಕು.
ಗೋವಿಂದ ಕಾರಜೋಳ ಮೀಸಲಾತಿ ಬಗ್ಗೆ ನಾನು ಮಾತನಾಡುವುದಿಲ್ಲ. ಕಾರಜೋಳ ಗೆಲ್ಲಲು ಹಾಗೂ ಯಡಿಯೂರಪ್ಪ ಸರ್ಕಾರ ಇರುವುದಕ್ಕೂ ಪಂಚಮಸಾಲಿ ಸಮಾಜ ಕಾರಣ. ಇದನ್ನು ಅವರು ಮರೆಯಬಾರದು ಎಂದಿದ್ದಾರೆ.