ಕರ್ನಾಟಕ

karnataka

ETV Bharat / state

ಮೂರು ಕ್ಷೇತ್ರಗಳಲ್ಲಿ ನಾವೇ ಗೆಲ್ತೇವೆ : ವಿಪಕ್ಷ ನಾಯಕ ಸಿದ್ದರಾಮಯ್ಯ - ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ

ಸಿಡಿ ವಿಚಾರವಾಗಿ ನಾನು ಮಾತನಾಡಲ್ಲ. ಆದ್ರೆ, ನ್ಯಾಯಯುತವಾಗಿ ತನಿಖೆ ಮಾಡಬೇಕಿದೆ. ಸಂತ್ರಸ್ತೆ ಹೇಳಿದ ಮೇಲೆ ಎಸ್​ಐಟಿ ಅದನ್ನ ಗಂಭೀರವಾಗಿ ಪರಿಗಣಿಸಬೇಕಿದೆ ಎಂದರು. ಸಿಡಿ ಪ್ರಕರಣದಲ್ಲಿ ಮಾಜಿ ಸಚಿವ ಸುಧಾಕರ್ ಹೆಸರು ಪ್ರಸ್ತಾಪ ವಿಚಾರಕ್ಕೆ ಪ್ರತಿಕ್ರಿಯಿಸಿ, ಸುಧಾಕರ್ ನನಗೂ ಅದಕ್ಕೂ ಸಂಬಂಧ ಇಲ್ಲ ಎಂದು ಹೇಳಿದ್ದಾರಲ್ಲ ಎಂದರು..

siddaramiah
ವಿಪಕ್ಷ ನಾಯಕ ಸಿದ್ದರಾಮಯ್ಯ

By

Published : Apr 5, 2021, 4:48 PM IST

ಕುಷ್ಟಗಿ/ಕೊಪ್ಪಳ :ಮಸ್ಕಿ, ಬಸವಕಲ್ಯಾಣ ವಿಧಾನಸಭೆ ಹಾಗೂ ಬೆಳಗಾವಿ ವಿಧಾನಸಭೆ ಈ ಮೂರು ಕ್ಷೇತ್ರಗಳಲ್ಲಿ ನಾವೇ ಗೆಲ್ತೀವಿ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ..

ಸೋಮವಾರ ಮಸ್ಕಿ ವಿಧಾನಸಭೆ ಉಪಚುನಾವಣೆ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ತಾವರಗೇರಾ ಪಟ್ಟಣದ ತಾತ್ಕಾಲಿಕ ಹೆಲಿಪ್ಯಾಡ್​​ನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಸುದ್ದಿಗಾರರೊಂದಿಗೆ ಮಾತನಾಡಿದರು.

ಕಾಂಗ್ರೆಸ್ ಚಿಲ್ಲರೆ ರಾಜಕಾರಣ ಮಾಡ್ತಾರೆ ಎಂದ ಜಗದೀಶ್ ಶೆಟ್ಟರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಚಿಲ್ಲರೆ ಅಂದ್ರೆ ಏನೂ? ಜಗದೀಶ್ ಶೆಟ್ಟರ್ ಒಬ್ಬ ಸಚಿವರಾಗಿ ಬೇಜಾವ್ದಾರಿಯಿಂದ ಮಾತನಾಡಬಾರದು.‌ ನಿಮ್ಮ ಹತ್ರ ಏನ್ ಎವಿಡೆನ್ಸ್ ಇದೆ ಎಂದು ಪ್ರಶ್ನಿಸಿದರು.

ಓದಿ:ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಚಿಲ್ಲರೆ ರಾಜಕಾರಣ ಮಾಡುತ್ತಿದ್ದಾರೆ: ಸಚಿವ ಶೆಟ್ಟರ್

ಸಿಡಿ ವಿಚಾರವಾಗಿ ನಾನು ಮಾತನಾಡಲ್ಲ. ಆದ್ರೆ, ನ್ಯಾಯಯುತವಾಗಿ ತನಿಖೆ ಮಾಡಬೇಕಿದೆ. ಸಂತ್ರಸ್ತೆ ಹೇಳಿದ ಮೇಲೆ ಎಸ್​ಐಟಿ ಅದನ್ನ ಗಂಭೀರವಾಗಿ ಪರಿಗಣಿಸಬೇಕಿದೆ ಎಂದರು. ಸಿಡಿ ಪ್ರಕರಣದಲ್ಲಿ ಮಾಜಿ ಸಚಿವ ಸುಧಾಕರ್ ಹೆಸರು ಪ್ರಸ್ತಾಪ ವಿಚಾರಕ್ಕೆ ಪ್ರತಿಕ್ರಿಯಿಸಿ, ಸುಧಾಕರ್ ನನಗೂ ಅದಕ್ಕೂ ಸಂಬಂಧ ಇಲ್ಲ ಎಂದು ಹೇಳಿದ್ದಾರಲ್ಲ ಎಂದರು. ಈ ವೇಳೆ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ ಕೆ ಶಿವಕುಮಾರ ಜೊತೆಗಿದ್ದರು.

ABOUT THE AUTHOR

...view details