ಕೊಪ್ಪಳ:ಗೃಹಿಣಿಯೊಬ್ಬಳು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಚಿಕ್ಕಬೊಮ್ಮನಾಳ ಗ್ರಾಮದಲ್ಲಿ ನಡೆದಿದೆ.
ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಪತ್ತೆ... ಪತಿ ನಾಪತ್ತೆ! - Woman committed suicide in Koppal,
ಗೃಹಿಣಿಯೊಬ್ಬಳು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ನಡೆದಿದೆ.
![ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಪತ್ತೆ... ಪತಿ ನಾಪತ್ತೆ! Woman committed suicide, Woman committed suicide in Koppal, Koppal Woman suicide news, ಮಹಿಳೆ ಆತ್ಮಹತ್ಯೆ, ಕೊಪ್ಪಳದಲ್ಲಿ ಮಹಿಳೆ ಆತ್ಮಹತ್ಯೆ, ಕೊಪ್ಪಳ ಮಹಿಳೆ ಆತ್ಮಹತ್ಯೆ ಸುದ್ದಿ,](https://etvbharatimages.akamaized.net/etvbharat/prod-images/768-512-5916166-879-5916166-1580530176284.jpg)
ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಪತ್ತೆ
ಭೀಮವ್ವ ನೆಲಜೇರಿ (29) ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಸಾವಿನ ಕುರಿತು ಅನುಮಾನ ವ್ಯಕ್ತವಾಗಿದೆ. ಭೀಮವ್ವಳ ಪತಿ ಪಂಪಣ್ಣ ತನ್ನ ಪತ್ನಿಯನ್ನು ಕೊಲೆ ಮಾಡಿ ನೇಣು ಬಿಗಿದಿದ್ದಾನೆ ಎಂದು ಮೃತಳ ಸಂಬಂಧಿಕರು ಆರೋಪಿಸಿದ್ದಾರೆ. ನಿನ್ನೆ ಮಧ್ಯಾಹ್ನ ಭೀಮವ್ವಳ ತವರು ಮನೆಗೆ ಹೋಗಿ ನಿಮ್ಮ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪತಿ ಪಂಪಣ್ಣ ವಿಷಯ ತಿಳಿಸಿ ನಾಪತ್ತೆಯಾಗಿದ್ದಾನೆ ಎನ್ನಲಾಗಿದೆ.
ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.