ಕರ್ನಾಟಕ

karnataka

ETV Bharat / state

'ಟೆಸ್ಟ್‌ ರಿಪೋರ್ಟ್ ಕೇಳಿ ಚಿಕಿತ್ಸೆಗೆ ನಿರ್ಲಕ್ಷ್ಯ': ಕೊಪ್ಪಳದಲ್ಲಿ ಕಾರಿನಲ್ಲೇ ಕೊನೆಯುಸಿರೆಳೆದ ಮಹಿಳೆ

ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆ ಕಾರಿನಲ್ಲೇ ಮೃತಪಟ್ಟಿದ್ದು, ಆಸ್ಪತ್ರೆ ಮುಂದೆ ಘಂಟೆಗಟ್ಟಲೆ ಕಾದರೂ ವೈದ್ಯರು ಚಿಕಿತ್ಸೆ ಕೊಟ್ಟಿಲ್ಲ ಎಂದು ಸಂಬಂಧಿಕರು ಆರೋಪಿಸಿದ್ದಾರೆ.

woman dies in a car without timely treatment
ಸಕಾಲಕ್ಕೆ ಚಿಕಿತ್ಸೆ ಸಿಗದೆ ಕಾರಿನಲ್ಲೇ ಮಹಿಳೆ ಸಾವು

By

Published : May 12, 2021, 7:56 AM IST

ಕೊಪ್ಪಳ: ಸಕಾಲಕ್ಕೆ ಚಿಕಿತ್ಸೆ ಸಿಗದೆ ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆ ಕಾರಿನಲ್ಲೇ ಕೊನೆಯುಸಿರೆಳೆದ ಘಟನೆ ತಡರಾತ್ರಿ ನಗರದಲ್ಲಿ ನಡೆದಿದೆ.

ತಾಲೂಕಿನ ಹಿರೇಸಿಂದೋಗಿ ಗ್ರಾಮದ ರೇಣುಕಾ ಮೃತ ಮಹಿಳೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಈಕೆಯನ್ನು ಚಿಕಿತ್ಸೆಗಾಗಿ ಕಾರಿನಲ್ಲಿ ಕೊಪ್ಪಳಕ್ಕೆ ಕರೆತರಲಾಗಿತ್ತು. ಇಲ್ಲಿನ ಖಾಸಗಿ ಆಸ್ಪತ್ರೆಗಳಿಗೆ ಓಡಾಡಿದರೂ ಎಲ್ಲೂ ಸಕಾಲಕ್ಕೆ ಚಿಕಿತ್ಸೆ ದೊರೆಯಲಿಲ್ಲ. ಆ ಬಳಿಕ ಮಹಿಳೆಯ ಸಂಬಂಧಿಕರು ಅವರನ್ನು ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಅಲ್ಲಿ ಮೂರು ಗಂಟೆಗಳಷ್ಟು ಕಾಲ ಕಾದರೂ ಕೂಡ ವೈದ್ಯರು ಚಿಕಿತ್ಸೆ ನೀಡಲಿಲ್ಲ. ಕೋವಿಡ್ ಟೆಸ್ಟ್ ಮಾಡಿಸಿಕೊಂಡು ಬನ್ನಿ ಎಂದು ಹೇಳಿ ನಿರ್ಲಕ್ಷ್ಯ ತೋರಿದ್ದಾರೆ. ಕೊನೆಗೆ ಚಿಕಿತ್ಸೆ ಸಿಗದೆ ರೇಣುಕಾ ಕಾರಿನಲ್ಲೇ ಮೃತಪಟ್ಟರು ಎಂದು ಸಂಬಂಧಿಕರು ಗಂಭೀರ ಆರೋಪ ಮಾಡಿದ್ದಾರೆ.

ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಮೃತಳ ಸಂಬಂಧಿಕರು

ಇದನ್ನೂಓದಿ: ಕೊಪ್ಪಳದಲ್ಲಿ 224 ಕೋವಿಡ್​ ಕೇಸ್ ಪತ್ತೆ​, 7 ಮಂದಿ ಸಾವು

ವೈದ್ಯರ ನಿರ್ಲಕ್ಷ್ಯವೇ ಮಹಿಳೆಯ ಸಾವಿಗೆ ಕಾರಣವೆಂದು ಮೃತಳ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ABOUT THE AUTHOR

...view details