ಕರ್ನಾಟಕ

karnataka

ETV Bharat / state

ಲಾಕ್ ಡೌನ್ ಸಂದರ್ಭದಲ್ಲಿ ನೆರವಿಗೆ ಬಂದ ನರೇಗಾ ಯೋಜನೆ: ಗಂಗಾವತಿಯಲ್ಲಿ ನೂರಾರು ಕೂಲಿ ಕಾರ್ಮಿಕರಿಗೆ ಕೆಲಸ - ಗಂಗಾವತಿಯಲ್ಲಿ ನರೇಗಾ ಯೋಜನೆಯಡಿ ಕೂಲಿ ಕಾರ್ಮಿಕರಿಗೆ ಕೆಲಸ

ಲಾಕ್ ಡೌನ್​ನಿಂದಾಗಿ ಕೆಲಸವಿಲ್ಲದೆ ಕೂಲಿ ಕಾರ್ಮಿಕರು ಸಂಕಷ್ಟಕ್ಕೆ ಒಳಗಾಗಬಾರದು ಎಂಬ ನಿಟ್ಟಿನಲ್ಲಿ ಗಂಗಾವತಿ ತಾಲೂಕಿನಾದ್ಯಂತ ನರೇಗಾ ಯೋಜನೆಯಡಿ ವಿವಿಧ ಕಾಮಾಗಾರಿಗಳನ್ನು ಪ್ರಾರಂಭಿಸಿ ಕೂಲಿ ಕಾರ್ಮಿಕರಿಗೆ ಕೆಲಸ ಕೊಡಲಾಗಿದೆ.

Workers Started Works Under MNAREGA Scheme in Gangavati
ಗಂಗಾವತಿಯಲ್ಲಿ ನರೇಗಾ ಯೋಜನೆಯಡಿ ಕೂಲಿ ಕಾರ್ಮಿಕರಿಗೆ ಕೆಲಸ

By

Published : May 11, 2020, 1:53 PM IST

ಗಂಗಾವತಿ: ಕೊರೊನಾ ಲಾಕ್ ಡೌನ್ ಸಂದರ್ಭದಲ್ಲಿ ಕೂಲಿ ಕಾರ್ಮಿಕರಿಗೆ ಆರ್ಥಿಕ ಸಂಕಷ್ಟ ಎದುರಾಗದಂತೆ ನೋಡಿಕೊಳ್ಳಲು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ನಾನಾ ಕಾಮಗಾರಿಗಳನ್ನು ಕೈಗೆತ್ತಿಕೊಂಡಿದ್ದಾರೆ.

ತಾಲೂಕಿನ ವೆಂಕಟಗಿರಿ ಗ್ರಾಮ ಪಂಚಾಯತ್​ ವ್ಯಾಪ್ತಿಯ ವಿಠಲಾಪುರ ಕೆರೆಯ ಹೂಳೆತ್ತುವುದು, ದಾಸನಾಳ ಗ್ರಾಮದ ಉಪ ಕಾಲುವೆಯ ಹೂಳು ತೆಗೆಯುವುದು ಸೇರಿದಂತೆ ವಿವಿಧ ಗ್ರಾಮ ಪಂಚಾಯತ್​ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯಡಿ ಕೆಲಸ ಕೊಡುವ ಮೂಲಕ ಕಾರ್ಮಿಕರ ನೆರವಿಗೆ ಬಂದಿದ್ದಾರೆ.

ಗಂಗಾವತಿಯಲ್ಲಿ ನರೇಗಾ ಯೋಜನೆಯಡಿ ಕೂಲಿ ಕಾರ್ಮಿಕರಿಗೆ ಕೆಲಸ

ತಾಲೂಕು ಪಂಚಾಯತ್​ ಸಿಇಒ ಡಾ.ಡಿ.ಮೋಹನ್ ನೇತೃತ್ವದಲ್ಲಿ ನರೇಗಾ ಕಾಮಗಾರಿಗಳನ್ನು ಆರಂಭಿಸಲಾಗಿದ್ದು, ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಮತ್ತು ಕಡ್ಡಾಯ ಮಾಸ್ಕ್ ಧರಿಸುವಂತೆ ಕಾರ್ಮಿಕರಿಗೆ ಸೂಚಿಸಲಾಗಿದೆ. ಅಲ್ಲದೆ, ಕಾರ್ಮಿಕರಿಗೆ ಸ್ಯಾನಿಟೈಸರ್​, ನೆರಳಿನ ವ್ಯವಸ್ಥೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡುವಂತೆ ಪಂಚಾಯತ್​ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

For All Latest Updates

TAGGED:

ABOUT THE AUTHOR

...view details