ಕರ್ನಾಟಕ

karnataka

ETV Bharat / state

ಗಂಗಾವತಿ: ಚಾಕುವಿನಿಂದ ಇರಿದು ಯುವಕನ ಕೊಲೆ - youth murdered in gangavati

ದುಷ್ಕರ್ಮಿಗಳ ತಂಡ ಯುವಕನನ್ನು ಬರ್ಬರವಾಗಿ ಕೊಲೆಗೈದ ಘಟನೆ ಗಂಗಾವತಿಯಲ್ಲಿ ನಡೆದಿದ್ದು, ಆರೋಪಿಗಳಿಗೆ ಪೊಲೀಸರು ಶೋಧ ನಡೆಸುತ್ತಿದ್ದಾರೆ.

youth-murdered-by-a-gang-at-karatagi-gangavati
ಕ್ಷುಲ್ಲಕ ಕಾರಣಕ್ಕೆ ಯುವಕನ‌ ಮೇಲೆ ಮಾರಣಾಂತಿಕ ಹಲ್ಲೆ: ಯುವಕ ಸಾವು

By

Published : Apr 4, 2022, 8:11 AM IST

ಗಂಗಾವತಿ: ದುಷ್ಕರ್ಮಿಗಳ ತಂಡ ಯುವಕನನ್ನು ಚಾಕುವಿನಿಂದ ಇರಿದು ಕೊಲೆಗೈದ ಘಟನೆ ಗಂಗಾವತಿ ತಾಲೂಕಿನ ಕಾರಟಗಿಯಲ್ಲಿ ನಡೆದಿದೆ. ಅಬ್ದುಲ್‌ನಜೀರ್ ಸಾಬ ಕಾಲೋನಿ ನಿವಾಸಿ ವೀರೇಶ (27) ಕೊಲೆಯಾಗಿದ್ದಾರೆ. ಹಲ್ಲೆಯಿಂದ ತೀವ್ರ ರಕ್ತಸ್ರಾವವಾಗಿ ಯುವಕ ಸ್ಥಳದಲ್ಲಿಯೇ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ. ಪಟ್ಟಣದ ಹೊಸ ಬಸ್ ನಿಲ್ದಾಣದ ಸಮೀಪ‌ ಘಟನೆ ನಡೆದಿದೆ. ಆರೋಪಿಗಳು ಪರಾರಿಯಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ABOUT THE AUTHOR

...view details