ಕೊಪ್ಪಳ:ನಗರದ ಜೆ ಹೆಚ್ ಪಟೇಲ್ ಸಭಾಂಗಣದಲ್ಲಿ ಇಂದು ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆ ನಡೆಯಿತು.
ಜಿಪಂ ಸಾಮಾನ್ಯ ಸಭೆ.. ಕುಡಿಯುವ ನೀರಿಗಾಗಿ ಸದಸ್ಯರ ಆಗ್ರಹ - ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಇಂದು ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆ
ಕೊಪ್ಪಳದ ಜಿಲ್ಲಾ ಪಂಚಾಯತ್ನಲ್ಲಿ ಇಂದು ಸಾಮಾನ್ಯ ಸಭೆ ಜರುಗಿತು. ಕುಡಿಯುವ ನೀರಿಗಾಗಿ ಸದಸ್ಯರು ಪಟ್ಟು ಹಿಡಿದರು.
ಕೊಪ್ಪಳ ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆ
ಸಭೆಯಲ್ಲಿ ಕುಡಿಯುವ ನೀರು ಪೂರೈಕೆ ಹಾಗೂ ಆರ್ಒ ಪ್ಲಾಂಟ್ ಕುರಿತಂತೆ ತೀವ್ರ ಚರ್ಚೆ ನಡೆದಿದೆ. ಆರ್ಒ ಪ್ಲಾಂಟ್ ನಿರ್ಮಾಣ ಮಾಡಲು ಲಕ್ಷಾಂತರ ರೂಪಾಯಿ ಖರ್ಚಾಗಿದೆ. ಆದರೂ ಸಮರ್ಪಕವಾಗಿ ಕುಡಿಯುವ ನೀರಿನ ವ್ಯವಸ್ಥೆಯಾಗಿಲ್ಲ. ಅತೀ ಶೀಘ್ರದಲ್ಲೇ ಕುಡಿಯುವ ನೀರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಎಂದು ಜಿಲ್ಲಾ ಪಂಚಾಯತ್ ಸದಸ್ಯರುಗಳು ಆಗ್ರಹಿಸಿದರು.
ಈ ಬಗ್ಗೆ ಪ್ರತಿಕ್ರಯಿಸಿದ ಜಿಪಂ ಅಧ್ಯಕ್ಷ ವಿಶ್ವನಾಥ್ ರೆಡ್ಡಿ ಅವರು, ಸಮಸ್ಯೆ ಬಗೆಹರಿಸುವುದಾಗಿ ಆಶ್ವಾಸನೆ ನೀಡಿದರು.