ಮಂಡ್ಯ:ಮನ್‌ಮುಲ್‌ನಲ್ಲಿ ಹಾಲಿಗೆ ನೀರು ಮಿಶ್ರಣದ ಪ್ರಕರಣದಲ್ಲಿ ಒಂದು ಸಾವಿರ ಕೋಟಿ ರೂ. ಹಗರಣ ನಡೆದಿದೆ ಎಂದು ಮಾಜಿ ಸಚಿವ ಚೆಲುವರಾಯಸ್ವಾಮಿ ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಮದ್ದೂರಿನ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜೆಡಿಎಸ್ ಮನ್‌ಮುಲ್ ಹಗರಣದ ಸಂಪೂರ್ಣ ಹೊಣೆ ಹೊರಬೇಕು. ಸುಮಾರು ಒಂದು ಸಾವಿರ ಕೋಟಿ ರೂ. ಹಗರಣ ನಡೆದಿದೆ. ಈ ಹಗರಣಕ್ಕೆ ಪ್ರೋತ್ಸಾಹ ನೀಡುತ್ತಿರುವವರು ಜೆಡಿಎಸ್ ನಾಯಕರು ಎಂದು ಗಂಭೀರವಾಗಿ ಆರೋಪಿಸಿದರು. ಅಲ್ಲದೇ ಇದಕ್ಕಿಂತ ದುರಂತ ಈ ಜಿಲ್ಲೆಗೆ ಇನ್ನೊಂದಿಲ್ಲ ಎಂದು ಜೆಡಿಎಸ್ ವಿರುದ್ಧ ಚೆಲುವರಾಯಸ್ವಾಮಿ ಕಿಡಿಕಾರಿದ್ದಾರೆ.