ಮಂಡ್ಯ : ಚಲಿಸುತ್ತಿದ್ದ ರೈಲಿಗೆ ಸಿಲುಕಿ 10 ಕುರಿಗಳು ಸೇರಿ ಓರ್ವ ಕುರಿಗಾಹಿ ಧಾರುಣವಾಗಿ ಮೃತಪಟ್ಟ ಘಟನೆ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ. ಮೈಸೂರಿನಿಂದ ಶ್ರೀರಂಗಪಟ್ಟಣ ಮಾರ್ಗವಾಗಿ ಬೆಂಗಳೂರಿಗೆ ತೆರಳುತ್ತಿದ್ದ ಗೋಲ್ ಗುಂಬಜ್ ಎಕ್ಸ್ ಪ್ರೆಸ್ ರೈಲು, ಶ್ರೀರಂಗಪಟ್ಟಣ ಸಮೀಪದ ಪಾಲಹಳ್ಳಿ ಬಳಿ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.
ರೈಲ್ವೆ ಹಳಿ ಪಕ್ಕದಲ್ಲಿ ಮೇಯುತ್ತಿದ್ದ ಕುರಿಗಳು ರೈಲು ಆಗಮಿಸುವ ವೇಳೆ ರೈಲಿನ ಹಾರ್ನ್ ಶಬ್ದಕ್ಕೆ ಬೆದರಿ ರೈಲು ಹಳಿಗೆ ಬಂದು ನಿಂತಿವೆ. ರೈಲು ಬರುತ್ತಿದ್ದನ್ನು ಗಮನಿಸಿದ ಸ್ಥಳದಲ್ಲಿದ್ದ ಕುರಿಗಾಹಿ ಕುರಿಗಳನ್ನು ಓಡಿಸಲು ಯತ್ನಿಸಿದ್ದಾನೆ. ಈ ವೇಳೆ ಕುರಿಗಳ ಜೊತೆಗೆ ಆತನು ಕೂಡ ರೈಲಿಗೆ ಸಿಲುಕಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.