ಮಂಡ್ಯ: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಾವಿನ ಸಂಖ್ಯೆ ಏರಿಕೆಯಾಗುತ್ತಿದ್ದು, ಮಂಡ್ಯದಲ್ಲಿ ಒಂದೇ ದಿನ 13 ಮಂದಿ ಕೋವಿಡ್ಗೆ ಬಲಿಯಾಗಿದ್ದಾರೆ. ಈ ಮೂಲಕ ಈವರೆಗೆ ಜಿಲ್ಲೆಯಲ್ಲಿ ಕೋವಿಡ್ಗೆ ಬಲಿಯಾದವರ ಸಂಖ್ಯೆ 411ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿಂದು 643 ಜನರಿಗೆ ಕೊರೊನಾ ಸೋಂಕು ದೃಢವಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 55,487ಕ್ಕೆ ಏರಿಕೆಯಾಗಿದೆ. ಇಂದು 1,041 ಮಂದಿ ಗುಣಮುಖರಾಗಿದ್ದಾರೆ. ಈವರೆಗೆ ಒಟ್ಟು 49,261 ಮಂದಿ ಚೇತರಿಕೆ ಕಂಡಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 5,813ಕ್ಕೆ ಏರಿಕೆಯಾಗಿದೆ.
ತಾಲೂಕುವಾರು ಪ್ರಕರಣಗಳ ವಿವರ
ಮಂಡ್ಯ 176
ಮದ್ದೂರು 93
ಮಳವಳ್ಳಿ 19