ಕರ್ನಾಟಕ

karnataka

ಮಂಡ್ಯದಲ್ಲಿ ಇಂದು 13 ಜನರಿಗೆ ಕೊರೊನಾ​: ಸೋಂಕಿತರ ಸಂಖ್ಯೆ 302ಕ್ಕೆ ಏರಿಕೆ

By

Published : Jun 3, 2020, 7:38 PM IST

ಮಂಡ್ಯ ಜಿಲ್ಲೆಯಲ್ಲಿ ಮುಂಬೈನಿಂದ ಆಗಮಿಸಿದ ಜನರಲ್ಲಿಯೇ ಕೊರೊನಾ ಸೋಂಕು ಹೆಚ್ಚಾಗಿ ಕಾಣಿಸಿಕೊಂಡಿದ್ದು, ಇಲ್ಲಿಯವರೆಗೆ ಜಿಲ್ಲೆಯಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 302ಕ್ಕೆ ಏರಿಕೆಯಾಗಿದೆ.

Mandya
ಮಂಡ್ಯದಲ್ಲಿ ಇಂದು 13 ಜನರಿಗೆ ಪಾಸಿಟಿವ್​: ಸೋಂಕಿತರ ಸಂಖ್ಯೆ 302ಕ್ಕೆ ಏರಿಕೆ

ಮಂಡ್ಯ: ಜಿಲ್ಲೆಗೆ ಮುಂಬೈನಿಂದ ಆಗಮಿಸಿದ್ದ 13 ಜನರಲ್ಲಿ ಇಂದು ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ ಒಟ್ಟು 302ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಒಟ್ಟು 302 ಪ್ರಕರಣಗಳ ಪೈಕಿ 221 ಸಕ್ರಿಯ ಪ್ರಕರಣಗಳಿದ್ದು, ಉಳಿದ 81 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಮಂಡ್ಯದ ಮಿಮ್ಸ್​ನಲ್ಲಿ ಸೋಂಕಿತರೆಲ್ಲರಿಗೂ ಚಿಕಿತ್ಸೆ ನೀಡಲಾಗುತ್ತಿದೆ.

ಜಿಲ್ಲೆಗೆ ಅತಿ ಹೆಚ್ಚು ಮಂದಿ ಮುಂಬೈನಿಂದ ಆಗಮಿಸಿದ್ದು, ಅವರಲ್ಲಿಯೇ ಸೋಂಕು ಹೆಚ್ಚಾಗಿ ಪತ್ತೆಯಾಗುತ್ತಿದೆ. ಇನ್ನೂ ಹಲವರ ವರದಿಗಾಗಿ ಜಿಲ್ಲಾಡಳಿತ ಕಾಯುತ್ತಿದೆ.

ABOUT THE AUTHOR

...view details