ಕರ್ನಾಟಕ

karnataka

ETV Bharat / state

ಇಂದಿನಿಂದ ಮಂಡ್ಯ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ - ಇಂದಿನಿಂದ ಮಂಡ್ಯ ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿ ಜಿಲ್ಲಾಧಿಕಾರಿ ಆದೇಶ

ಮಂಡ್ಯ ಜಿಲ್ಲೆಯಲ್ಲಿ ಪಾಸಿಟಿವ್ ರೇಟ್(ಸೋಂಕು ದೃಢಪಡುವ ದರ) ಕಡಿಮೆ ಇದ್ದು, ಜನರು ಎಚ್ಚರಿಕೆ ವಹಿಸದಿದ್ದರೆ ಮುಂದಿನ ದಿನಗಳಲ್ಲಿ ಮತ್ತಷ್ಟು ಕಠಿಣ ನಿಯಮಗಳನ್ನು ಜಿಲ್ಲಾಡಳಿತ ಜಾರಿಗೆ ತರಲಿದೆ ಎಂದು ಜಿಲ್ಲಾಧಿಕಾರಿ ಎಸ್.ಅಶ್ವಥಿ ಹೇಳಿದ್ದಾರೆ.

ಜಿಲ್ಲಾಧಿಕಾರಿ ಎಸ್.ಅಶ್ವಥಿ
ಜಿಲ್ಲಾಧಿಕಾರಿ ಎಸ್.ಅಶ್ವಥಿ

By

Published : Aug 4, 2021, 10:51 AM IST

ಮಂಡ್ಯ: ಕೋವಿಡ್​​- 19 ಮೂರನೇ ಅಲೆ ನಿಯಂತ್ರಣಕ್ಕೆ ಮಂಡ್ಯ ಜಿಲ್ಲಾಡಳಿತ ಮುಂದಾಗಿದೆ. ಈ ನಿಟ್ಟಿನಲ್ಲಿ ಇಂದಿನಿಂದಲೇ ಜಾರಿಯಾಗುತ್ತಿದ್ದಂತೆ ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿ ಮಾಡಿ ಆದೇಶ ಹೊರಡಿಸಿದೆ.

ಆದೇಶ ಪ್ರತಿ
ಅತೀ ಹೆಚ್ಚು ಜನ ಸೇರುವ ಮದುವೆ, ಬೀಗರ ಔತಣ, ಅಂತ್ಯಸಂಸ್ಕಾರ, ತಿಥಿ, ಕಾರ್ಯಕ್ರಮಕ್ಕೆ 30 ಜನರಿಗೆ ಮಾತ್ರ ಅವಕಾಶ ನೀಡಿದ್ದು, ದೇವಸ್ಥಾನಗಳಲ್ಲಿ ದೈನಂದಿನ ಪೂಜಾ ಕೈಂಕರ್ಯಕ್ಕೆ ಅವಕಾಶ ಕಲ್ಪಿಸಿಕೊಟ್ಟಿದೆ.
ಆದೇಶ ಪ್ರತಿ

ಅಮವಾಸ್ಯೆ, ಹುಣ್ಣಿಮೆ, ಧಾರ್ಮಿಕ ಸೇವೆ, ಉತ್ಸವ, ಜಾತ್ರೆಗಳಿಗೆ ನಿರ್ಬಂಧ ವಿಧಿಸಲಾಗಿದೆ. ವೀಕೆಂಡ್‌ನಲ್ಲಿ ದೇವಸ್ಥಾನಗಳಿಗೆ ಭಕ್ತಾದಿಗಳ ಪ್ರವೇಶ ರದ್ದು ಮಾಡಿದ್ದು, ಸಭೆ ಸಮಾರಂಭ, ರ್ಯಾಲಿ, ಧರಣಿ, ಮುಷ್ಕರ, ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಬಂದ್ ಮಾಡುವ ಮೂಲಕ ಕೊವಿಡ್ ನಿಯಂತ್ರಣಕ್ಕೆ ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮವಹಿಸಿದೆ.

ಸದ್ಯ ಮಂಡ್ಯ ಜಿಲ್ಲೆಯಲ್ಲಿ ಪಾಸಿಟಿವ್ ರೇಟ್ ಕಡಿಮೆ ಇದ್ದು, ಜನರು ಎಚ್ಚರಿಕೆ ವಹಿಸದಿದ್ದರೆ ಮುಂದಿನ ದಿನಗಳಲ್ಲಿ ಮತಷ್ಟು ಟಫ್ ರೂಲ್ಸ್‌ಗೆ ಜಿಲ್ಲಾಡಳಿತ ಮುಂದಾಗಲಿದೆ ಎಂದು ಜಿಲ್ಲಾಧಿಕಾರಿ ಎಸ್.ಅಶ್ವಥಿ ಎಚ್ಚರಿಸಿದ್ದಾರೆ.

ABOUT THE AUTHOR

...view details