ಮಂಡ್ಯ: ಜಿಲ್ಲೆಯಲ್ಲಿ ನಿನ್ನೆ ಸಾವಿರಕ್ಕೂ ಹೆಚ್ಚು ಜನರಲ್ಲಿ ಮಾರಕ ರೋಗದ ಸೋಂಕು ಕಾಣಿಸಿಕೊಂಡಿದೆ. 6 ಮಂದಿ ಮೃತಪಟ್ಟಿದ್ದಾರೆ.
ಸದ್ಯ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 35,222 ಕ್ಕೆ ಏರಿಕೆಯಾಗಿದೆ. 757 ಮಂದಿ ಗುಣಮುಖರಾಗಿದ್ದಾರೆ. ಈವರೆಗೆ ಒಟ್ಟು 27,878 ಮಂದಿ ಗುಣಮುಖರಾಗಿದ್ದು ಆಸ್ಪತ್ರೆಗಳಿಂದ ಬಿಡುಗಡೆ ಹೊಂದಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 7,116 ಕ್ಕೆ ಏರಿಕೆಯಾಗಿದೆ. ಇಲ್ಲಿಯವರೆಗೆ ಒಟ್ಟು 226 ಸೋಂಕಿತರು ಸಾವನ್ನಪ್ಪಿದ್ದಾರೆ.