ಕರ್ನಾಟಕ

karnataka

ETV Bharat / state

2ನೇ ಹಂತದ ಗ್ರಾ.ಪಂ ಚುನಾವಣೆ: ಮಂಡ್ಯದಲ್ಲಿ ಶಾಂತಿಯುತ ಮತದಾನ - Mandya

ಕೆ.ಆರ್.ಪೇಟೆ ತಾಲ್ಲೂಕಿನ ಹಿರಿಯ ರಾಜಕೀಯ ಮುತ್ಸದ್ಧಿ, ಮಾಜಿ ಸ್ಪೀಕರ್ ಕೃಷ್ಣ ತಮ್ಮ ಪತ್ನಿ ಇಂದ್ರಮ್ಮ ಜೊತೆ ಸಂತೇಬಾಚಹಳ್ಳಿ ಹೋಬಳಿಯ ಸೋಮೇನಹಳ್ಳಿ ಮತಗಟ್ಟೆಯಲ್ಲಿ ಮತ ಚಲಾಯಿಸಿದ್ದಾರೆ.

Mandya
2ನೇ ಹಂತದ ಗ್ರಾ.ಪಂ ಚುನಾವಣೆ: ಮಂಡ್ಯದಲ್ಲಿ ಶಾಂತಿಯುತ ಮತದಾನ

By

Published : Dec 27, 2020, 10:04 PM IST

ಮಂಡ್ಯ: ಕೃಷ್ಣರಾಜಪೇಟೆ ತಾಲ್ಲೂಕಿನ 33 ಗ್ರಾಮ ಪಂಚಾಯಿತಿಗಳ 587 ಸದಸ್ಯರ ಆಯ್ಕೆಗಾಗಿ ನಡೆದ 2ನೇ ಹಂತದ ಗ್ರಾಮ ಪಂಚಾಯತಿ ಚುನಾವಣೆ ಶಾಂತಿಯುತವಾಗಿ ನಡೆದಿದೆ.

2ನೇ ಹಂತದ ಗ್ರಾ.ಪಂ ಚುನಾವಣೆ: ಮಂಡ್ಯದಲ್ಲಿ ಶಾಂತಿಯುತ ಮತದಾನ

ರಂಗನಾಥಪುರ ಕ್ರಾಸ್ ಗ್ರಾಮ ಪಂಚಾಯತಿಗೆ ಸೇರಿದ ಬಿಲ್ಲೇನಹಳ್ಳಿ ಗ್ರಾಮದಲ್ಲಿ ತಾಲ್ಲೂಕು ಪಂಚಾಯತಿ ಸದಸ್ಯ ದಿನೇಶ್ ಬೆಂಬಲಿಗರು ಹಾಗೂ ಬಿಜೆಪಿ ಬೆಂಬಲಿತ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ. ಘಟನೆ ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿದ್ದು ಪೋಲಿಸರ ಮಧ್ಯಪ್ರವೇಶದಿಂದಾಗಿ ಪರಿಸ್ಥಿತಿ ತಿಳಿಗೊಂಡಿದೆ.

ಬೆಳಿಗ್ಗೆ10 ಗಂಟೆಯವರೆಗೂ ಮಂದಗತಿಯಲ್ಲಿ ಆರಂಭವಾದ ಮತದಾನ ಪ್ರಕ್ರಿಯೆ ಮಧ್ಯಾಹ್ನದ ನಂತರ ಚುರುಕುಗೊಂಡಿತು. ಕೆ.ಆರ್.ಪೇಟೆ ತಾಲ್ಲೂಕಿನ ಹಿರಿಯ ರಾಜಕೀಯ ಮುತ್ಸದ್ಧಿ, ಮಾಜಿ ಸ್ಪೀಕರ್ ಕೃಷ್ಣ ತಮ್ಮ ಪತ್ನಿ ಇಂದ್ರಮ್ಮ ಜೊತೆ ಸಂತೇಬಾಚಹಳ್ಳಿ ಹೋಬಳಿಯ ಸೋಮೇನಹಳ್ಳಿ ಮತಗಟ್ಟೆಯಲ್ಲಿ ಮತ ಚಲಾಯಿಸಿದ್ದಾರೆ.

ಮಾಜಿ ಶಾಸಕ ಬಿ.ಪ್ರಕಾಶ್ ತಮ್ಮ ಪತ್ನಿ ಜಿ.ಪಂ ಮಾಜಿ ಸದಸ್ಯೆ ಹೇಮಾ ಅವರೊಂದಿಗೆ ಬೊಮ್ಮೇನಹಳ್ಳಿಯ ಮತಗಟ್ಟೆಯಲ್ಲಿ, ಜಿಲ್ಲಾ ಪಂಚಾಯತ್​ ಸದಸ್ಯ ಬಿ.ಎಲ್.ದೇವರಾಜು ಬಂಡಿಹೊಳೆ ಮತಗಟ್ಟೆಯಲ್ಲಿ, ಹೆಚ್.ಟಿ.ಮಂಜು ಹರಳಹಳ್ಳಿ ಮತಗಟ್ಟೆಯಲ್ಲಿ, ಜಿ.ಪಂ ಮಾಜಿ ಉಪಾಧ್ಯಕ್ಷ ಕಿಕ್ಕೇರಿ ಪ್ರಭಾಕರ್ ಕಿಕ್ಕೇರಿಯಲ್ಲಿ ಹಾಗೂ ಎಸ್.ಅಂಬರೀಶ್ ಶೀಳನೆರೆಯಲ್ಲಿ ಮತದಾನ ಮಾಡಿದ್ದಾರೆ.

ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ.ನಾರಾಯಣಗೌಡ ಮತ್ತು ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಕೆ.ಆರ್.ಪೇಟೆ ಪಟ್ಟಣದ ನಿವಾಸಿಗಳಾಗಿದ್ದು, ಪುರಸಭೆಯಲ್ಲಿ ಮತದಾನದ ಹಕ್ಕನ್ನು ಹೊಂದಿರುವುದರಿಂದ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಮತ ಚಲಾಯಿಸಲಿಲ್ಲ.

ABOUT THE AUTHOR

...view details