ಮಂಡ್ಯ:ಜಿಲ್ಲೆಯಲ್ಲಿಂದು ಕೊರೊನಾ ರಣಕೇಕೆ ಹಾಕಿದ್ದು, 224 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ.
ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 21,645ಕ್ಕೆ ಏರಿಕೆಯಾಗಿದ್ದು, ಮಂಡ್ಯ ಜಿಲ್ಲೆಯಲ್ಲಿಂದು 90 ಮಂದಿ ಗುಣಮುಖರಾಗಿದ್ದಾರೆ. ಈವರೆಗೆ 20,498 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 981ಕ್ಕೆ ಏರಿಕೆಯಾಗಿದೆ.
ಮಂಡ್ಯ ಜಿಲ್ಲೆಯಲ್ಲಿಂದು ಓರ್ವ ಕೊರೊನಾಗೆ ಬಲಿಯಾಗಿದ್ದು, ಜಿಲ್ಲೆಯಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 166ಕ್ಕೆ ಹೆಚ್ಚಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.