ಮಂಡ್ಯ: ಜಿಲ್ಲೆಯ ಕೊರೊನಾ ಸೋಂಕು ಪೀಡಿತರಲ್ಲಿ ಮತ್ತೆ ನಾಲ್ವರು ಗುಣಮುಖರಾಗಿದ್ದಾರೆ. ಇವರನ್ನೀಗ ನಿಗದಿತ ಆಸ್ಪತ್ರೆಯಿಂದ ಬಿಡುಗಡೆ ಮಾಡಿ ಹೋಂ ಕ್ವಾರಂಟೈನ್ ಮಾಡಲಾಗಿದೆ.
ಮಂಡ್ಯದಲ್ಲಿ 4 ಸೋಂಕಿತರು ಗುಣಮುಖ.. ಚೇತರಿಕೆಯತ್ತ ಸಾಗಿದ ಸಕ್ಕರೆನಾಡು.. - ಒಟ್ಟು 28 ಕೊರೊನಾ ಪ್ರಕರಣ
ಈವರೆಗೂ ಜಿಲ್ಲೆಯಲ್ಲಿ ಒಟ್ಟು 28 ಕೊರೊನಾ ಪ್ರಕರಣ ದಾಖಲಾಗಿತ್ತು. ಇದರಲ್ಲಿ 11 ಮಂದಿ ಗುಣಮುಖರಾಗಿದ್ದಾರೆ. ಸದ್ಯ 17ಮಂದಿಗೆ ಮಾತ್ರ ಚಿಕಿತ್ಸೆ ನೀಡಲಾಗುತ್ತಿದೆ. ಇವರಲ್ಲೂ ಕೆಲವರು ಶೀಘ್ರ ಗುಣಮುಖರಾಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.
ಮಂಡ್ಯದಲ್ಲಿ 4 ಸೋಂಕಿತರು ಗುಣಮುಖ.
ರೋಗಿಗಳಾದ ಪಿ-237, ಪಿ-371, ಪಿ-322, ಪಿ-323 ಗುಣಮುಖರಾಗಿದ್ದು, ಇವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 11 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಈವರೆಗೂ ಜಿಲ್ಲೆಯಲ್ಲಿ ಒಟ್ಟು 28 ಕೊರೊನಾ ಪ್ರಕರಣ ದಾಖಲಾಗಿತ್ತು. ಇದರಲ್ಲಿ 11 ಮಂದಿ ಗುಣಮುಖರಾಗಿದ್ದಾರೆ. ಸದ್ಯ 17ಮಂದಿಗೆ ಮಾತ್ರ ಚಿಕಿತ್ಸೆ ನೀಡಲಾಗುತ್ತಿದೆ. ಇವರಲ್ಲೂ ಕೆಲವರು ಶೀಘ್ರ ಗುಣಮುಖರಾಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.