ಮಂಡ್ಯ: ಜಿಲ್ಲೆಯಲ್ಲಿ ಬ್ಲ್ಯಾಕ್ ಫಂಗಸ್ ರೋಗಕ್ಕೆ ಎರಡನೇ ಬಲಿಯಾಗಿದೆ. ಕೆಆರ್‌ಪೇಟೆ ತಾಲೂಕು ಮೂಲದ 63 ವರ್ಷದ ವೃದ್ಧೆ ಕಪ್ಪು ಶಿಲೀಂದ್ರ ಸೋಂಕಿನಿಂದ ಸಾವನ್ನಪ್ಪಿರುವುದಾಗಿ ಮಿಮ್ಸ್ ಆಸ್ಪತ್ರೆಯ ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ಬ್ಲ್ಯಾಕ್ ಫಂಗಸ್ಗೆ ಮಂಡ್ಯದಲ್ಲಿ ಎರಡನೇ ಬಲಿ : 63 ವರ್ಷದ ವೃದ್ಧೆ ಸಾವು - ಮಂಡ್ಯದ ಬ್ಲ್ಯಾಕ್ ಫಂಗಸ್ ಪ್ರಕರಣಗಳು
ಜಿಲ್ಲೆಯಲ್ಲಿ ನಾಲ್ವರಿಗೆ ಬ್ಲ್ಯಾಕ್ ಫಂಗಸ್ ದೃಢವಾಗಿತ್ತು. ಮೊನ್ನೆಯಷ್ಟೆ ಓರ್ವನ ಸಾವಾಗಿದ್ದು, ಮೂವರು ಚಿಕಿತ್ಸೆ ಪಡೆಯುತ್ತಿದ್ದರು..
mandya
ಮಂಡ್ಯದ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೃದ್ಧೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ನಾಲ್ವರಿಗೆ ಬ್ಲ್ಯಾಕ್ ಫಂಗಸ್ ದೃಢವಾಗಿತ್ತು.
ಮೊನ್ನೆಯಷ್ಟೆ ಓರ್ವನ ಸಾವಾಗಿದ್ದು, ಮೂವರು ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ, ಇಂದು ಕಳೆದ ಮೇ 23ರಿಂದ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೃದ್ಧೆ ಸಾವನ್ನಪ್ಪಿದ್ದಾರೆ.