ಮಂಡ್ಯ: ಮಂಡ್ಯ ಜಿಲ್ಲೆಯಲ್ಲಿ ನಿನ್ನೆ 688 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದೇ ವೇಳೆ 216 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. ಮೂವರು ಸೋಂಕಿಗೆ ಬಲಿಯಾಗಿದ್ದಾರೆ.
ಜಿಲ್ಲೆಯಲ್ಲಿ ಈವರೆಗೆ 24,760 ಜನರಿಗೆ ಕೊರೊನಾ ದೃಢಪಟ್ಟಿದ್ದು, 21,405 ಮಂದಿ ಗುಣಮುಖರಾಗಿದ್ದಾರೆ. ಮಿಮ್ಸ್ನಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 3,173 ಆಗಿದೆ.
ಈವರೆಗೆ ಜಿಲ್ಲೆಯಲ್ಲಿ 181 ಮಂದಿ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.