ಮಂಡ್ಯ:ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ಮಳವಳ್ಳಿ ತಾಲೂಕಿನ ಸಂಶೆಟ್ಟಿಪುರದ ಬಳಿ ಸಂಭವಿಸಿದೆ.
ಮಳವಳ್ಳಿ ಬಳಿ ಕಾರುಗಳ ಮಧ್ಯೆ ಭೀಕರ ಅಪಘಾತ: ಮಹಿಳೆ ಸಾವು, ನಾಲ್ವರ ಸ್ಥಿತಿ ಗಂಭೀರ - latest mandya news
ಕಾರುಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ನಾಲ್ವರು ಗಾಯಗೊಂಡು, ಓರ್ವ ಮಹಿಳೆ ಸ್ಥಳದಲ್ಲೇ ಸಾವಿಗೀಡಾದ ಘಟನೆ ಮಳವಳ್ಳಿ ತಾಲೂಕಿನ ಸಂಶೆಟ್ಟಿಪುರದ ಬಳಿ ನಡೆದಿದೆ.
ಕಾರುಗಳ ಮುಖಾಮುಖಿ ಡಿಕ್ಕಿ : ಮಹಿಳೆ ಸಾವು, ನಾಲ್ವರು ಗಂಭೀರ
ಮೈಸೂರು-ಮಳವಳ್ಳಿ ರಸ್ತೆಯಲ್ಲಿರುವ ಸಂಶೆಟ್ಟಿಪುರ ಗ್ರಾಮದ ಬಳಿ ಎರಡೂ ಕಾರುಗಳು ಮುಖಾಮುಖಿ ಡಿಕ್ಕಿ ಹೊಡೆದಿದ್ದು, ಮೃತಪಟ್ಟ ಮಹಿಳೆ ಹಾಗೂ ಗಾಯಾಳುಗಳ ಮಾಹಿತಿ ಇನ್ನೂ ತಿಳಿದುಬಂದಿಲ್ಲ.
ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ನಂತರ ಮೈಸೂರಿನ ಖಾಸಗಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಸದ್ಯ ಕಿರುಗಾವಲು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.