ಮಂಡ್ಯ:ಡೆಂಗ್ಯೂ ಜ್ವರಕ್ಕೆ ಬಾಲಕಿ ಬಲಿಯಾಗಿದ್ದು, ಆಕೆಯ ಸಹೋದರಿಯೂ ತೀವ್ರ ಅಸ್ವಸ್ಥಗೊಂಡು ಚಿಕಿತ್ಸೆ ಪಡೆಯುತ್ತಿರುವ ಘಟನೆ ಕೆ.ಆರ್.ಪೇಟೆ ತಾಲೂಕಿನ ಅಗಸರಹಳ್ಳಿಯಲ್ಲಿ ನಡೆದಿದೆ.
ಡೆಂಗ್ಯೂಗೆ ಬಾಲಕಿ ಬಲಿ: ಸಹೋದರಿ ಅಸ್ವಸ್ಥ - ಸಹೋದರಿ ತೀವ್ರವಾಗಿ ಅಸ್ವಸ್ಥ
ಮಂಡ್ಯದಲ್ಲಿ ಡೆಂಗ್ಯೂ ಜ್ವರಕ್ಕೆ ಬಾಲಕಿ ಬಲಿಯಾಗಿದ್ದಾಳೆ. ಈಕೆಯ ಸಹೋದರಿ ಕೂಡ ಡೆಂಗ್ಯೂವಿನಿಂದ ಬಳಲುತ್ತಿದ್ದು, ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾಳೆ.
ಡೆಂಗ್ಯೂಗೆ ಬಾಲಕಿ ಬಲಿ
ಅಗಸರಹಳ್ಳಿ ಗ್ರಾಮದ ರಾಣಿ ರವಿಕುಮಾರ್ ದಂಪತಿ ಪುತ್ರಿ ಹೇಮಾವತಿ(07) ಮೃತ ದುರ್ದೈವಿ. ಈಕೆಯ ಸಹೋದರಿ ಪ್ರೇರಣ(05) ಕೂಡ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದು, ಮೈಸೂರಿನ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೇಮಾವತಿ ಮತ್ತು ಪ್ರೇರಣಾ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಮುಂಜಾನೆ ಹೇಮಾವತಿ ಚಿಕಿತ್ಸೆ ಫಲಕಾರಿಯಾಗದೇ ಅಸುನೀಗಿದ್ದಾಳೆ. ಈಕೆಯ ಸಹೋದರಿ ತೀವ್ರವಾಗಿ ಅಸ್ವಸ್ಥವಾಗಿದ್ದು, ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾಳೆ.