ಮಂಡ್ಯ:ಮಗಳ ಮುಂದೆಯೇ ಚಾಕುವಿನಿಂದ ಇರಿದು ಮಹಿಳೆಯೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಪಾಂಡವಪುರ ತಾಲೂಕಿನ ಎಲೆಕೆರೆ ಗ್ರಾಮದಲ್ಲಿ ನಡೆದಿದೆ. ಮೃತ ಮಹಿಳೆಯನ್ನು 50 ವರ್ಷದ ಪಾರ್ವತಮ್ಮ ಎಂದು ಗುರುತಿಸಲಾಗಿದೆ. ಮಗಳು ಅರ್ಪಿತಾ ಮುಂದೆ ಆಕೆಯ ತಾಯಿಯನ್ನು ಕೊಲೆ ಮಾಡಿ ದುಷ್ಕರ್ಮಿಯೋರ್ವ ಪರಾರಿಯಾಗಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.
ಮಂಡ್ಯ: ಮಗಳ ಮುಂದೆಯೇ ತಾಯಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ - ಭೀಕರ ಕೊಲೆ
ಮಂಡ್ಯ ಜಿಲ್ಲೆಯಲ್ಲಿ ಭೀಕರ ಕೊಲೆ ನಡೆದಿದೆ. ಆರೋಪಿಯೊಬ್ಬ ಮಹಿಳೆಯೋರ್ವಳನ್ನು ಬರ್ಬರವಾಗಿ ಕೊಲೆ ಮಾಡಿದ್ದಾನೆ.
Published : Dec 13, 2023, 10:34 AM IST
ತಾಯಿ ಮತ್ತು ಮಗಳು ಮನೆ ದೇವರ ಪೂಜೆ ಮುಗಿಸಿಕೊಂಡು ಮನೆಗೆ ವಾಪಸ್ ಬರುತ್ತಿದ್ದರು. ಈ ವೇಳೆ ಆರೋಪಿಯೊಬ್ಬ ಅರ್ಧ ಕಿಲೋಮೀಟರ್ವರೆಗೂ ತಾಯಿ ಮತ್ತು ಮಗಳನ್ನು ಹಿಂಬಾಲಿಸಿಕೊಂಡು ಬಂದಿದ್ದಾನೆ. ನಿರ್ಜನ ಪ್ರದೇಶ ನೋಡಿ ಆರೋಪಿಯು ಪಾರ್ವತಮ್ಮನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾನೆ. ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಘಟನೆ ಕುರಿತು ಇನ್ನಷ್ಟು ಮಾಹಿತಿ ಲಭ್ಯವಾಗಬೇಕಿದೆ.
ಓದಿ:ಉಡುಪಿ: ಸಮಾಜ ಸೇವಕ, ನಾಟಕಕಾರ ಕಾಪು ಲೀಲಾಧರ ಶೆಟ್ಟಿ ದಂಪತಿ ಆತ್ಮಹತ್ಯೆಗೆ ಶರಣು