ಕರ್ನಾಟಕ

karnataka

ETV Bharat / state

ಮಂಡ್ಯ: ಕೊಂಡ ಹಾಯುವಾಗ ಆಯತಪ್ಪಿ ಬಿದ್ದ ಪೂಜಾರಿ, ಗಂಭೀರ ಗಾಯ - ಮಂಡ್ಯ ಸುದ್ದಿ

ಗ್ರಾಮ ದೇವತೆ ಹಬ್ಬದ ಅಂಗವಾಗಿ ಇಂದು ಕೊಂಡಹಾಯಲು ಹೋಗಿದ್ದ ಪೂಜಾರಿ ಆಯತಪ್ಪಿ ಕೊಂಡಕ್ಕೆ ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಳವಳ್ಳಿ ತಾಲೂಕಿನ ಅಮೃತೇಶ್ವರಹಳ್ಳಿ ಗ್ರಾಮದಲ್ಲಿ ನಡೆದಿದೆ.

mandya
ಕೊಂಡ ಹಾಯುವಾಗ ಆಯತಪ್ಪಿ ಬಿದ್ದ ಪೂಜಾರಿ

By

Published : Mar 24, 2021, 11:46 AM IST

ಮಂಡ್ಯ: ಕೊಂಡ ಹಾಯಲು ಹೋದ ಪೂಜಾರಿ ಕೊಂಡಕ್ಕೆ ಬಿದ್ದು ತೀವ್ರವಾಗಿ ಗಾಯಗೊಂಡ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಅಮೃತೇಶ್ವರಹಳ್ಳಿ ಗ್ರಾಮದಲ್ಲಿ ನಡೆದಿದೆ.

ಕೊಂಡ ಹಾಯುವಾಗ ಆಯತಪ್ಪಿ ಬಿದ್ದ ಪೂಜಾರಿ

ಗ್ರಾಮ ದೇವತೆ ಹಬ್ಬದ ನಿಮಿತ್ತ ಇಂದು ಕೊಂಡಹಾಯಲು ಹೋಗಿದ್ದ ಪೂಜಾರಿ ಆಯತಪ್ಪಿ ಕೊಂಡಕ್ಕೆ ಬಿದ್ದು ಗಂಭೀರ ಗಾಯಗೊಂಡಿದ್ದಾನೆ. ಜಿಲ್ಲೆಯಲ್ಲಿ ಈ ಹಿಂದೆಯು ಕೊಂಡಕ್ಕೆ ಬಿದ್ದಿರುವ ಹಲವಾರು ಪ್ರಕರಣಗಳಿದ್ದು, ಈಗಲೂ ಕೂಡ ಮುಂದುವರೆದಿದೆ. ಇಂದು ಬೆಳಗ್ಗೆ ಕೊಂಡಕ್ಕೆ ಬಿದ್ದು ಗಾಯಗೊಂಡ ಅರ್ಚಕನನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲು‌ ಮಾಡಲಾಗಿದೆ.

ಇದನ್ನು ಓದಿ:ವೈರಮುಡಿ ಉತ್ಸವ: ಜಿಲ್ಲಾ ಖಜಾನೆಯಿಂದ ಮೇಲುಕೋಟೆಗೆ ಕಿರೀಟ ರವಾನೆ

ಈ ಹಿಂದೆ ಕೂಡ ಜಿಲ್ಲೆಯಲ್ಲಿ ಇಂತಹ ಹಲವಾರು ಪ್ರಕರಣಗಳು ನಡೆದಿದ್ದು, ಸಾವುಗಳು ಕೂಡ ಸಂಭವಿಸಿದೆ. ಇಷ್ಟಾದರೂ ಎಚ್ಚೆತ್ತುಕೊಳ್ಳದೇ ಕೊಂಡ ಹಾಯಲು ಜನರು ಮುಂದಾಗಿದ್ದಾರೆ.

ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ‌ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿದ್ದಾರೆ.

ABOUT THE AUTHOR

...view details