ಮಂಡ್ಯ:ಭದ್ರತೆಯ ನೆಪದಲ್ಲಿ ರಸ್ತೆ ಬದಿ ವ್ಯಾಪಾರ ಮಾಡುತ್ತಿದ್ದ ವ್ಯಕ್ತಿವೋರ್ವನ ಮೇಲೆ ಸಿಬ್ಬಂದಿ ಹಲ್ಲೆ ಮಾಡಿರುವ ಆರೋಪ ಪ್ರಕರಣ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದಿದೆ.
ರಸ್ತೆ ಬದಿ ವ್ಯಾಪಾರ ಮಾಡುತ್ತಿದ್ದ ವ್ಯಕ್ತಿ ಮೇಲೆ ಕೆಆರ್ಎಸ್ ಭದ್ರತಾ ಸಿಬ್ಬಂದಿ ಹಲ್ಲೆ ಆರೋಪ - ರಸ್ತೆ ಬದಿ ವ್ಯಾಪಾರ ಮಾಡುತ್ತಿದ್ದ ವ್ಯಕ್ತಿ ಮೇಲೆ ಹಲ್ಲೆ
ರಾತ್ರಿ ವೇಳೆ ಶ್ರೀರಂಗಪಟ್ಟಣದ ಬೃಂದಾವನದ ದ್ವಾರದ ಬಳಿ ರಸ್ತೆ ಬದಿ ವ್ಯಾಪಾರ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಕೆ ಆರ್ ಎಸ್ನ ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ.
ಹಲ್ಲೆ
ಕೆಆರ್‌ಎಸ್‌ನ ಮುದ್ದ ಎಂಬುವರ ಮೇಲೆ ಹಲ್ಲೆ ನಡೆದಿದೆ. ಹುಚ್ಚೇಗೌಡ ಎಂಬ ಭದ್ರತಾ ಸಿಬ್ಬಂದಿ ಈ ಹಿಂದೆಯೂ ಕೂಡ ಈ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ್ದರು ಎನ್ನಲಾಗ್ತಿದೆ.
ಈಗಲೂ ಈತನೇ ರಾತ್ರಿ ವೇಳೆ ಬೃಂದಾವನದ ದ್ವಾರದ ಬಳಿ ರಸ್ತೆ ಬದಿ ವ್ಯಾಪಾರ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗ್ತಿದೆ. ಹಲ್ಲೆಗೊಳಗಾದ ವ್ಯಕ್ತಿ ಮೈಸೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.