ಮಂಡ್ಯ: ಚಾರ್ಜ್ ಹಾಕಿ ಮೊಬೈಲ್ನಲ್ಲಿ ಮಾತನಾಡುತ್ತಿದ್ದ ವೇಳೆ ಮಹಿಳೆಗೆ ವಿದ್ಯುತ್ ತಗುಲಿ ಆಕೆ ಸಾವನ್ನಪ್ಪಿರುವ ಘಟನೆ ಮದ್ದೂರು ತಾಲೂಕಿನ ಕಬ್ಬಾರೆ ಗ್ರಾಮದಲ್ಲಿ ನಡೆದಿದೆ.
ಚಾರ್ಜ್ ಹಾಕಿಕೊಂಡು ಮೊಬೈಲ್ನಲ್ಲಿ ಮಾತನಾಡುತ್ತಿದ್ದ ಮಹಿಳೆ ದುರ್ಮರಣ - ವಿದ್ಯುತ್ ಶಾರ್ಟ್
ಚಾರ್ಜ್ ಹಾಕಿಕೊಂಡು ಮೊಬೈನಲ್ಲಿ ಮಾತನಾಡುತ್ತಿದ್ದ ವೇಳೆ ವಿದ್ಯುತ್ ಶಾಕ್ ತಗುಲಿ ಮಹಿಳೆ ಸಾವನ್ನಪ್ಪಿರುವ ಘಟನೆ ಮದ್ದೂರು ತಾಲೂಕಲ್ಲಿ ನಡೆದಿದೆ.
ಮೊಬೈಲ್ನಲ್ಲಿ ಮಾತನಾಡುತ್ತಿದ್ದ ಮಹಿಳೆ ಸಾವು
ಸೌಭಾಗ್ಯ(33) ಮೃತ ಮಹಿಳೆ. ಚಾರ್ಜ್ ಹಾಕಿ ಮಾತನಾಡುವಾಗ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿ ಸೌಭಾಗ್ಯ ಸಾವಿಗೀಡಾಗಿದ್ದಾಳೆ ಎಂದು ತಿಳಿದುಬಂದಿದೆ.
ಮದ್ದೂರು ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.