ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ಹೋಗಿ ಯುವಕ ಸಾವನ್ನಪ್ಪಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಪ್ರವಾಸಿ ತಾಣ ಬಲಮುರಿಯಲ್ಲಿ ನಡೆದಿದೆ.
ಕಾವೇರಿ ನದಿಯಲ್ಲಿ ಈಜಲು ತೆರಳಿದ ಯುವಕ ಸಾವು - ಮಂಡ್ಯ ಕಾವೇರಿ ನದಿಯಲ್ಲಿ ಯುವಕ ಸಾವು ನ್ಯೂಸ್
ಬೆಂಗಳೂರು ನಗರದ ನಿವಾಸಿಯೊಬ್ಬ ಕಾವೇರಿ ನದಿಯಲ್ಲಿ ಈಜಲು ಹೋಗಿ ಸಾವನ್ನಪ್ಪಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಪ್ರವಾಸಿ ತಾಣ ಬಲಮುರಿಯಲ್ಲಿ ನಡೆದಿದೆ.

Died
ಬೆಂಗಳೂರು ನಗರದ ನಿವಾಸಿ ಅಭಿಷೇಕ್ (26) ಮೃತ ದುರ್ದೈವಿಯಾಗಿದ್ದು, ಸ್ನೇಹಿತರ ಜೊತೆ ಪ್ರವಾಸಕ್ಕೆ ಬಂದು ನದಿಗಿಳಿದು ಈಜಲು ಹೋಗಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ಇನ್ನು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತ ದೇಹಕ್ಕಾಗಿ ಹುಡುಕಾಟ ನಡೆಸಲಾಗುತ್ತಿದೆ. ಈ ಸಂಬಂಧ ಕೆ.ಆರ್.ಎಸ್. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.