ಮಂಡ್ಯ: ಹಳೇ ವೈಷಮ್ಯದ ಹಿನ್ನೆಲೆ ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಶ್ರೀರಾಂಪುರ ಗ್ರಾಮ ಸಮೀಪದ ಕ್ರಷರ್ ಬಳಿ ನಡೆದಿದೆ.
ಶ್ರೀರಂಗಪಟ್ಟಣ ಬಳಿ ಯುವಕನ ಕೊಚ್ಚಿ ಕೊಲೆ: ಹಳೇ ದ್ವೇಷ ಕಾರಣವಾಯ್ತಾ ಹತ್ಯೆಗೆ? - ಮಂಡ್ಯದಲ್ಲಿ ಯುವಕನ ಮೇಲೆ ದಾಳಿ
ದುಷ್ಕರ್ಮಿಗಳ ತಂಡವೊಂದು ಯುವಕನ ಮೇಲೆ ಏಕಾಏಕಿ ದಾಳಿ ಮಾಡಿ, ಬರ್ಬರವಾಗಿ ಕೊಲೆ ಮಾಡಿದೆ. ಶ್ರೀರಂಗಪಟ್ಟಣ ತಾಲೂಕಿನಲ್ಲಿ ಕೊಲೆ ನಡೆದಿದೆ.
ಶ್ರೀರಂಗಪಟ್ಟಣ ಬಳಿ ಯುವಕನ ಕೊಚ್ಚಿ ಕೊಲೆ
ಶ್ರೀರಂಗಪಟ್ಟಣ ತಾಲೂಕಿನ ಜಕ್ಕನಹಳ್ಳಿ ಗ್ರಾಮದ ನಿವಾಸಿ ಪೂರ್ಣಚಂದ್ರು (28) ಬರ್ಬರವಾಗಿ ಕೊಲೆಯಾದ ಯುವಕ. ಕ್ರಷರ್‌ನಲ್ಲಿದ್ದ ಈತನ ಮೇಲೆ ದಾಳಿ ಮಾಡಿದ ದುಷ್ಕರ್ಮಿಗಳ ತಂಡ, ಏಕಾಏಕಿ ಲಾಂಗು ಮಚ್ಚುಗಳಿಂದ ಹಲ್ಲೆ ಮಾಡಿ ಬರ್ಬರವಾಗಿ ಹತ್ಯೆ ಮಾಡಿದೆ.
ಹಳೇ ವೈಷಮ್ಯದ ಹಿನ್ನೆಲೆ ಕೊಲೆ ನಡೆದಿದೆ ಎನ್ನಲಾಗಿದೆ. ಸ್ಥಳಕ್ಕೆ ಎಸ್ಪಿ ಕೆ.ಪರಶುರಾಮ್ ಸೇರಿದಂತೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದರು. ಶ್ರೀರಂಗಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.