ಬೈಕ್ಗೆ ಟಿಪ್ಪರ್ ಡಿಕ್ಕಿ: ಒಂದೇ ಕುಟುಂಬದ ಮೂವರ ದುರ್ಮರಣ - ಮಂಡ್ಯದಲ್ಲಿ ಅಪಘಾತ
ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಮಲ್ಲಾಕನಹಳ್ಳಿ ಗ್ರಾಮದ ಬಳಿ ನಡೆದ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟ ಘಟನೆ ನಡೆದಿದೆ.
accident
ಮಂಡ್ಯ: ಟಿಪ್ಪರ್ ಹೊಡೆದ ಪರಿಣಾಮ ಬೈಕ್ನಲ್ಲಿದ್ದ ಮೂವರು ಮೃತಪಟ್ಟ ಘಟನೆ ಮಲ್ಲಾಕನಹಳ್ಳಿ ಗ್ರಾಮದ ಗೇಟ್ ಬಳಿ ನಡೆದಿದೆ.
ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಮಲ್ಲಾಕನಹಳ್ಳಿ ಗ್ರಾಮದ ಬಳಿ ಇರುವ ತುಮಕೂರು-ಮಂಡ್ಯ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ ಅಪಘಾತವಾಗಿದೆ. ವೇಗವಾಗಿ ಬಂದ ಟಿಪ್ಪರ್, ಬೈಕ್ಗೆ ಡಿಕ್ಕಿ ಹೊಡೆದಿದ್ದರಿಂದ ಅವಘಡ ಸಂಭವಿಸಿದೆ.