ಮಂಡ್ಯ: ಕಾರು ಚಾಲಕನ ನಿಯಂತ್ರಣ ತಪ್ಪಿ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವಿಗೀಡಾದ ಘಟನೆ ಮದ್ದೂರು ತಾಲೂಕು ಗೆಜ್ಜಲಗೆರೆಯ ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ನಡೆದಿದೆ.
ಮೈಸೂರು ಕಡೆಗೆ ತೆರಳುತ್ತಿದ್ದ ಮಾರುತಿ ರಿಟ್ಜ್ ಕಾರು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದು ಮತ್ತೊಂದು ಪಥಕ್ಕೆ ಬಿದ್ದ ಪರಿಣಾಮ ಎದುರು ಬಂದ ಸಾರಿಗೆ ಸಂಸ್ಥೆ ಬಸ್ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಮಂಡ್ಯ ತಾಲೂಕಿನ ಹೆಬ್ಬಕವಾಡಿ ಗ್ರಾಮದ ರವಿ (31), ರವಿ ಪತ್ನಿ ಮಂಜುಳಾ (28) ಪುತ್ರ ಸಾಗರ್ (8) ಹಾಗೂ ಪುತ್ರಿ ಸುಕನ್ಯಾ (6) ಸಾವಿಗೀಡಾಗಿದ್ದಾರೆ.