ಮಂಡ್ಯ: ಬೈಕ್ಗೆ ಕಾರು ಡಿಕ್ಕಿಯಾಗಿ ಬೈಕ್ ಸವಾರ ಸಾವಿಗೀಡಾಗಿ, ಬಸ್‌ಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಕೋಡಿಶೆಟ್ಟಿಪುರ ಬಳಿ ನಡೆದಿದೆ.
ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು... - ಕಾರು
ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಬೈಕ್ಗೆ ಡಿಕ್ಕಿ ಹೊಡೆದು ನಂತರ ನಿಂತಿದ್ದ ವಿದ್ಯಾರ್ಥಿನಿ ಮೇಲೆ ಹರಿದಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಲ್ಲಿ ನಡೆದಿದೆ.
ಕಾರು
ಗದಗ ಮೂಲದ ಬೈಕ್ ಸವಾರ ಸಂತೋಷ್ (22) ಸ್ಥಳದಲ್ಲೇ ಸಾವಿಗೀಡಾದರೆ, ಬಸ್ಗೆ ಕಾಯುತ್ತಿದ್ದ ಮೌನಶ್ರೀ (20) ಗೆ ಕಾಲು ಕಟ್ ಆಗಿ ತೀವ್ರವಾಗಿ ಗಾಯಗೊಂಡಿದ್ದಾಳೆ. ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಬೈಕ್ ಗೆ ಡಿಕ್ಕಿ ಹೊಡೆದು ನಂತರ ನಿಂತಿದ್ದ ವಿದ್ಯಾರ್ಥಿನಿ ಮೇರೆ ಹರಿದಿದೆ.
ಕಾರಿನಲ್ಲಿದ್ದ ನಾಲ್ವರಿಗೂ ಗಾಯಗೊಂಡಿದ್ದು, ಗಾಯಾಳುಗಳನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಸ್ಥಳಕ್ಕೆ ಶ್ರೀರಂಗಪಟ್ಟಣ ಪೊಲೀಸರು ಭೇಟಿ ಪರಿಶೀಲನೆ ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದಾರೆ.